ಧನ್ವೀರ್ ವರ್ಸಸ್ ವಿಜಯಲಕ್ಷ್ಮೀ ವಾರ್‌ಗೆ ಬಿಗ್ ಟ್ವಿಸ್ಟ್! ಮಧ್ಯೆ ಝೈದ್ ಖಾನ್ ಎಂಟ್ರಿ, ಧನ್ವೀರ್ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ!

Published : Nov 17, 2026, 06:15 AM IST

ವಸತಿ ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ವಿ ರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಾಗೂ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ(Vijayalakshmi Darshan) ಅವರನ್ನು ನಿಂದಿಸಿದ ಆರೋಪದ ಮೇಲೆ ನಟ ಧನ್ವೀರ್(Actor Dhanveer) ವಿರುದ್ಧ ದಾಖಲಾಗಿರುವ ಮೂರು ಎಫ್‌ಐಆರ್‌ಗಳಿಗೆ ಹೈಕೋರ್ಟ್ ತಡೆ

PREV
14
ಧನ್ವೀರ್‌ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್(Zaid Khan) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಾಗೂ ನಟ ದರ್ಶನ್(Actor darshan) ಅವರ ಪತ್ನಿ ವಿಜಯಲಕ್ಷ್ಮೀ(Vijayalakshmi Darshan) ಅವರನ್ನು ನಿಂದಿಸಿದ ಆರೋಪದ ಮೇಲೆ ನಟ ಧನ್ವೀರ್(Actor Dhanveer) ವಿರುದ್ಧ ದಾಖಲಾಗಿರುವ ಮೂರು ಎಫ್‌ಐಆರ್‌ಗಳಿಗೆ ಹೈಕೋರ್ಟ್(Karnataka High court) ಮಧ್ಯಂತರ ತಡೆ ನೀಡಿದೆ.

24
ನಟ ಧನ್ವೀರ್ Vs ವಿಜಯಲಕ್ಷ್ಮಿ ದರ್ಶನ್

ಪ್ರಕರಣ ಸಂಬಂಧ ತಮ್ಮ ವಿರುದ್ಧ ಚಾಮರಾಜಪೇಟೆ, ರಾಜರಾಜೇಶ್ವರಿ ನಗರ, ಬಸವೇಶ್ವರ ನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರತ್ಯೇಕ ಮೂರು ಎಫ್ಐಆರ್ ಹಾಗೂ ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ನಟ ಧನ್ವೀರ್ ಗೌಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಮಾನಾಥ ಹೆಗಡೆ ಅವರ ಪೀಠ, ರಾಜಾಜಿನಗರ ಹಾಗೂ ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ಅರ್ಜಿದಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳಿಗೆ ಸಂಬಂಧಿಸಿದ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

34
ಮೂರು ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಿಗೆ ತಡೆಯಾಜ್ಞೆ

ದರ ಜೊತೆಗೆ, ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನು ಸಹ ನ್ಯಾಯಾಲಯ ಮುಂದುವರಿಸಿದೆ. ಅಲ್ಲದೆ, ಅರ್ಜಿದಾರರ ವಿರುದ್ಧ ಆರೋಪಿಸಲಾಗಿರುವಂತೆ ನಿಂದನೆ ಮತ್ತು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾದ ಆಡಿಯೋದ ಸಂಪೂರ್ಣ ವಿವರಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು.

44
ಧನ್ವೀರ್ ವಿರುದ್ಧ ಕೇಸ್ ಏಕೆ? ಏನಿದು ಪ್ರಕರಣ?

ವಸತಿ ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಹಗುರವಾಗಿ ಮಾತನಾಡಿದ ಆರೋಪದಡಿ ಚಾಮರಾಜಪೇಟೆ ಠಾಣೆಯಲ್ಲಿ ಧನ್ವೀರ್ ವಿರುದ್ಧ ಝೈದ್ ಖಾನ್ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ್ ಎಂಬುವರು ದೂರು ನೀಡಿದ್ದರು. ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪದಡಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪಿ.ಎ. ನಾಗರಾಜು ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ಹಾಗೂ ಭೋಜರಾಜ ರೈ ಎಂಬುವರು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories