ಶಿಲ್ಪಾ ಶೆಟ್ಟಿ ಪ್ರತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಅವರು ಮಂಗಳವಾರ ತಮ್ಮ ಅಭಿಮಾನಿಗಳಿಗೆ ವಿಶ್ ಮಾಡಿದ್ದಾರೆ. ಪ್ರತಿ ಬಾರಿಯಂತೆ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸುವ ಹುಮ್ಮಸ್ಸಿನಲ್ಲಿ ಶಿಲ್ಪಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಈ ವರ್ಷದ ದೀಪಾವಳಿ ಅವರಿಗೆ ಮತ್ತೂ ವಿಶೇಷ. ಪತಿ ಅಶ್ಲೀಲ ವೀಡಿಯೋ ಚಿತ್ರೀಕರಣದ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿ, ಮನೆಗೆ ಮರಳಿದ್ದಾರೆ.