ರಾಮ್ ಚರಣ್ ಮತ್ತು ಶಂಕರ್ ಕಾಂಬಿನೇಷನ್‌ನಲ್ಲಿ ನಿರ್ಮಾಣವಾದ `ಗೇಮ್ ಚೇಂಜರ್` ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಮತ್ತು ಅಂಜಲಿ ನಾಯಕಿಯರಾಗಿ ನಟಿಸಿದ್ದಾರೆ. ಎಸ್ ಜೆ ಸೂರ್ಯ, ಶ್ರೀಕಾಂತ್, ಸುನಿಲ್, ನವೀನ್ ಚಂದ್ರ, ಸಮುದ್ರಖನಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಾಜಕೀಯ ಆಕ್ಷನ್ ಥ್ರಿಲ್ಲರ್ ಆಗಿರುವ ಈ ಚಿತ್ರದ ಭವಿಷ್ಯ ಇನ್ನೇನು ಕೆಲವೇ ಗಂಟೆಗಳಲ್ಲಿ ನಿರ್ಧಾರವಾಗಲಿದೆ. ಜನವರಿ 10 ರಂದು ಈ ಚಿತ್ರ ಬಿಡುಗಡೆಯಾಗಲಿದೆ.