ಬಾಲನಟಿಯಾಗಿ ಚಿತ್ರರಂಗ ಪ್ರವೇಶಿಸಿದ 'ಸ್ವಾತಿಮುತ್ತು' ನಟಿ ಮೀನಾರ ರೋಚಕ ಸಿನಿ ಪಯಣ

First Published | Jun 29, 2022, 12:31 PM IST

ದಕ್ಷಿಣ ಭಾರತದ ಖ್ಯಾತ ನಟಿ ಮೀನಾ ಪತಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ನಟಿ ಮೀನಾ ಪತಿ ವಿದ್ಯಾಸಾಗರ್ ನಿನ್ನ ರಾತ್ರಿ (ಜೂನ್ 28) ನಿಧನಹೊಂದಿರು. ಚೆನ್ನೈನ ಖಾಸಗಿ ಆತ್ಪತ್ರೆಯಲ್ಲಿ ಕಿಚಿತ್ಸೆ ಪಡೆಯುತ್ತಿದ್ದ ವಿದ್ಯಾಸಾಗರ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 

ದಕ್ಷಿಣ ಭಾರತದ ಖ್ಯಾತ ನಟಿ ಮೀನಾ ಪತಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ನಟಿ ಮೀನಾ ಪತಿ ವಿದ್ಯಾಸಾಗರ್ ನಿನ್ನ ರಾತ್ರಿ (ಜೂನ್ 28) ನಿಧನಹೊಂದಿರು. ಚೆನ್ನೈನ ಖಾಸಗಿ ಆತ್ಪತ್ರೆಯಲ್ಲಿ ಕಿಚಿತ್ಸೆ ಪಡೆಯುತ್ತಿದ್ದ ವಿದ್ಯಾಸಾಗರ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 

ನಟಿ ಮೀನಾ ಪತಿ ವಿದ್ಯಾಸಾಗರ್ ಹಠಾತ್ ನಿಧನ ಅವರ ಅಭಿಮಾನಿಗಳಲ್ಲಿ ಮತ್ತು ಕುಟುಂಬದವರಿಗೆ ಶಾಕ್ ನೀಡಿದೆ. ವಿದ್ಯಾಸಾಗರ್ ನಿಧನಕ್ಕೆ ಅನೇಕ ಸಿನಿ ಗಣ್ಯರು ಕಂಬನಿ ಮಿಡಿದಿದ್ದಾರೆ. ಶರತ್ ಕುಮಾರ್, ವೆಂಕಟೇಶ್, ಖುಷ್ಟೂ ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಸಂತೂಪ ಸೂಚಿಸಿದ್ದಾರೆ. 

Tap to resize

ನಟಿ ಮೀನಾ ದಕ್ಷಿಣ ಭಾರತದ ಖ್ಯಾತ ನಟಿ. ತಮಿಳು, ತೆಲುಗು, ಕನ್ನಡ, ಮಲಯಾಳಂ ಭಾಷೆಗಳಲ್ಲಿ ನಟಿಸಿರುವ ಮೀನಾ 90 ದಶಕದ ಬಹುಬೇಡಿಯ ನಟಿ. ಬಾಲನಟಿಯಾಗಿ ಸಿನಿಮಾರಂಗ ಪ್ರವೇಶ ಮಾಡಿದ ನಟಿ ಮೀನಾ ಬಳಿಕ ಸ್ಟಾರ್ ಆಗಿ ಮೆರೆದರು. 

ದಕ್ಷಿಣದ ಎಲ್ಲಾ ಭಾಷೆಯಲ್ಲೂ ಮಿಂಚಿರುವ ನಟಿ ಮೀನಾ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಮೀನಾ ದಕ್ಷಿಣ ಭಾರತದ ಅನೇಕ  ಸ್ಟಾರ್ ನಟರ ಜೊತೆ ಮೀನಾ ತೆರೆ ಹಂಚಿಕೊಂಡಿದ್ದಾರೆ.  1982ರಲ್ಲಿ ಬಾಲನಟಿಯಾಗಿ ಸಿನಿರಂಗ ಪ್ರವೇಶ ಮಾಡಿದ ನಟಿ ಮೀನಾ ಇಂದಿಗೂ ಸಿನಿಮಾರಂಗದಲ್ಲಿ ಸಕ್ರೀಯರಾಗಿದ್ದಾರೆ. 
 

ಕನ್ನಡದಲ್ಲಿ ಮೀನಾ ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ತೆಲುಗು ಮತ್ತು ತಮಿಳಿನಲ್ಲಿ ಸ್ಟಾರ್ ನಟಿಯಾಗಿ ಮೆರೆಯುತ್ತಿದ್ದ ವೇಳೆ ಮೀನಾ ಕನ್ನಡಕ್ಕೂ ಎಂಟ್ರಿ ಕೊಟ್ಟರು. ಕ್ರೇಜಿ ಸ್ಟಾರ್ ರವಿಚಂದ್ರನ್ ಪುಟ್ನಂಜ ಸಿನಿಮಾ ಮೂಲಕ ಕನ್ನಡಕ್ಕೆ ಕರೆತಂದರು. 

ಪುಟ್ನಂಜ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಯಿತು. ಹಾಡುಗಳು ಸಹ ಬ್ಲಾಕ್ ಬಸ್ಟರ್ ಹಿಟ್. ಈ ಸಿನಿಮಾ ಬಳಿಕ ಮೀನಾ ಅನೇಕ ಸಿನಿಮಾಗಳಲ್ಲಿ ಮಿಂಚಿದರು. ಸಂಹಾದ್ರಿಯ ಸಿಂಹ, ಸ್ವಾಮಿ ಮುತ್ತು, ಗೌಡ್ರು, ಮೈ ಆಟೋಗ್ರಾಫ್ ಸೇರಿದಂತೆ ಸೂಪರ್ ಹಿಟ್ ಸಿನಿಮಾಗಳ ಮೂಲಕ ಕನ್ನಡಿಗರನ್ನು ರಂಜಿಸಿದ್ದಾರೆ. 

ಸಿನಿಮಾರಂಗದಲ್ಲಿ ಬಹುಬೇಡಿಕೆ ಇರುವಾಗಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬೆಂಗಳೂರು ಮೂಲದ ಉದ್ಯಮಿ ವಿದ್ಯಾಸಾಗರ್ ಅವರ ಜೊತೆ ಮೀನಾ 2009ರಲ್ಲಿ ಹಸಮಣೆ ಏರಿದರು. ವಿದ್ಯಾಸಾಗರ್ ಮತ್ತು ಮೀನಾ ದಾಂಪತ್ಯಕ್ಕೆ ನೈನಿಕಾ ಎನ್ನುವ ಮುದ್ದಾದ ಮಗಳಿದ್ದಾಳೆ. 

ಈಗಲೂ ಮೀನಾ ಬಳಿ ಅನೇಕ ಸಿನಿಮಾಗಳಿವೆ. ಮಲಯಾಳಂ ಮತ್ತು ತೆಲುಗು ಸಿನಿಮಾಗಳಲ್ಲಿ ಮೀನಾ ಬ್ಯುಸಿಯಾಗಿದ್ದಾರೆ. ಮಲಯಾಳಂನ ಬ್ರೋ ಡ್ಯಾಡಿ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತ್ತು. ಸದ್ಯ ರೌಡಿ ತಮಿಳು ಸಿನಿಮಾದಲ್ಲಿ ಬ್ಯುಸಿಯಾಗಿದ್ದರು.  
 

Latest Videos

click me!