ಬಾಲಿವುಡ್ ನಟಿ ಜಾನ್ವಿ ಕಪೂರ್ ಒಂದಲ್ಲೊಂದು ವಿಚಾರಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಸಿನಿಮಾಗಿಂತ ಹೆಚ್ಚಾಗಿ ಜಾನ್ವಿ ಫೋಟೋ ಶೂಟ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುವ ಜಾನ್ವಿ ಆಗಾಗ ಸುಂದರ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ.
ಆಗಾಗ ಬೋಲ್ಡ್ ಫೋಟೋಶೂಟ್ ಮೂಲಕ ಮಿಂಚುವ ನಟಿ ಜಾನ್ವಿ ಇದೀಗ ಸಿನಿಮಾ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಜಾನ್ವಿ ನಟನೆಯ ಗುಡ್ ಲಕ್ ಜೆರ್ರಿ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಜಾನ್ವಿ ಭಾಗಿಯಾಗಿದ್ದಾರೆ.
ಪ್ರಚಾರ ವೇಳೆ ಜಾನ್ವಿ ಧರಿಸಿದ್ದ ಡ್ರೆಸ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಸಿಕ್ಕಾಪಟ್ಟೆ ಹಾಟ್ ಅಂಡ್ ಬೋಲ್ಡ್ ಆಗಿರುವ ನಟಿ ಜಾನ್ವಿ ಗುಡ್ ಲಕ್ ಜೆರ್ರಿಯಲ್ಲಿ ಮತ್ತಷ್ಟು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಡೀಪ್ ನೆಟ್ ಗೌನ್ ಧರಿಸಿದ್ದ ಜಾನ್ವಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಜಾನ್ವಿ ಕಪೂರ್ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ ರಾಜ್ ಕುಮಾರ್ ರಾವ್ ಜೊತೆ ಮಿಸ್ಟರ್ ಅಂಡ್ ಮಿಸೆಸ್ ಮಹಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬವಾಲ್, ಮಿಲಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಜಾನ್ವಿ ಕಪೂರ್ ಬ್ಯುಸಿಯಾಗಿದ್ದಾರೆ.
ಖ್ಯಾತ ನಟಿ ಶ್ರೀದೇವಿ ಪುತ್ರಿ ಜಾನ್ವಿ ಧಡಕ್ ಸಿನಿಮಾ ಮೂಲಕ ಮೊದಲ ಬಾರಿಗೆ ದೊಡ್ಡ ಪರದೆ ಮೇಲೆ ಮಿಂಚಿದರು. 2018ರಲ್ಲಿ ಜಾನ್ವಿ ಸಿನಿಮಾರಂಗ ಪ್ರವೇಶ ಪಡೆದರು. ತಾಯಿಯ ನಿಧನದ ಬಳಿಕ ಬಣ್ಣ ಹಚ್ಚಿದ ಜಾನ್ವಿಯನ್ನು ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದರು. ಇದೀಗ ಜಾನ್ವಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗದ್ದಾರೆ.
ಇನ್ನು ಜಾನ್ವಿ ಜೊತೆಗೆ ಸಹೋದರಿ ಖುಷಿ ಕೂಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ವೆಬ್ ಸೀರಿಸ್ ನಲ್ಲಿ ಖುಷಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಫಸ್ಟ್ ಲುಕ್ ರಿಲೀಸ್ ಆಗಿದ್ದು ಜಾನ್ವಿ ಸಂತಸ ಹಂಚಿಕೊಂಡಿದ್ದರು.