ಶಿಖರ್ ಪಹಾರಿಯಾ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್‌ಕುಮಾರ್ ಶಿಂಧೆ ಅವರ ಮೊಮ್ಮಗ. ಈ ಮೊದಲು ಜಾನ್ವಿ ಶಿಖರ್ ಪಹಾರಿಯಾ ಜೊತೆ ಡೇಟಿಂಗ್ ಮಾಡುತ್ತಿದ್ದರು. ಆದರೆ ಬಳಿಕ ಬ್ರೇಕಪ್ ಮಾಡಿಕೊಂಡು ದೂರ ಆಗಿದ್ದರು. ಇದೀಗ ಮತ್ತೆ ಒಂದಾಗಿದ್ದಾರೆ, ಮಾಲ್ಡೀವ್ಸ್ ಪ್ರವಾಸ ಮಾಡುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.