Raj B Shetty Karavali Trailer Conroversy: ‘ಕರಾವಳಿ’ ಸಿನಿಮಾದ ಟ್ರೈಲರ್ ಬಿಡುಗಡೆಗೆ ಅಡ್ಡಪಡಿಸಿದ ಆರೋಪದ ಮೇರೆಗೆ ನಟ ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಕರಾವಳಿ’ ಸಿನಿಮಾದ ಟ್ರೈಲರ್ ಬಿಡುಗಡೆಗೆ ಅಡ್ಡಪಡಿಸಿದ ಆರೋಪದ ಮೇರೆಗೆ ನಟ ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
24
Karavali’ trailer: ಪ್ರಜ್ವಲ್ ದೇವರಾಜ್ ಫ್ಯಾನ್ಸ್ ವಿರುದ್ಧ ದೂರು
ಈ ಬಗ್ಗೆ ಆ ಸಿನಿಮಾದ ನಿರ್ದೇಶಕ ಹಾಗೂ ನಿರ್ಮಾಪಕ ಗುರುದತ್ತ ಗಾಣಿಗ ಅವರು ನೀಡಿದ ದೂರಿನ ಅನ್ವಯ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಎನ್ನಲಾದ ದಿಲೀಪ್, ಅವಿನಾಶ್, ನಂದಕುಮಾರ್ ಸೇರಿ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
2 ದಿನ ಹಿಂದೆ ಕರಾವಳಿ ಚಲನಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಕೆಲ ದಿನಗಳ ಹಿಂದೆ ಗುರುದತ್ತ ಹಾಗೂ ನಟ ಪ್ರಜ್ವಲ್ ಮಧ್ಯೆ ಮನಸ್ತಾಪವಾಗಿತ್ತು. ಈ ಭಿನ್ನಾಭಿಪ್ರಾಯ ಹಿನ್ನೆಲೆಯಲ್ಲಿ ಟ್ರೈಲರ್ ಬಿಡುಗಡೆಗೆ ಪ್ರಜ್ವಲ್ ಗೈರಾಗಿದ್ದರು.
ನಟನ ಅನುಪಸ್ಥಿತಿಯಲ್ಲಿ ಟ್ರ್ರೈಲರ್ ಬಿಡುಗಡೆಗೆ ಅವರ ಅಭಿಮಾನಿಗಳು ಸಿಟ್ಟಿಗೆದ್ದು, ತಮಗೆ ಅವಾಚ್ಯ ಪದಗಳಿಂದ ನಿಂದಿಸಿ ಬೆದರಿಸಿದ್ದಾರೆ ಎಂದು ನಿರ್ದೇಶಕರು ಆರೋಪಿಸಿದ್ದಾರೆ.
ಕೆಲ ದಿನಗಳ ಹಿಂದೆ ಗುರುದತ್ತ ಹಾಗೂ ನಟ ಪ್ರಜ್ವಲ್ ಮಧ್ಯೆ ಮನಸ್ತಾಪವಾಗಿತ್ತು. ಸಂಭಾವನೆ ವಿಚಾರವಾಗಿ ಅಸಮಾಧಾನಗೊಂಡಿದ್ದ ಪ್ರಜ್ವಲ್ ದೇವರಾಜ್. ಹೀಗಾಗಿ ಅವರೇ ತಮ್ಮ ಸಹಾಯಕರನ್ನ ಫ್ಯಾನ್ಸ್ ಹೆಸರಲ್ಲಿ ಈ ಗಲಾಟೆ ಮಾಡಿಸಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಆದರೆ ಗಲಾಟೆ ಮಾಡಿದವರು ಪ್ರಜ್ವಲ್ ಆಪ್ತರೇ ಎಂಬುದು ಇನ್ನು ದೃಢಪಟ್ಟಿಲ್ಲ. ಸದ್ಯ ದೂರು ದಾಖಲಿಸಿದ್ದು ಪೊಲೀಸರು ತನಿಖೆ ಬಳಿಕವೇ ಅಸಲಿ ಕತೆ ಗೊತ್ತಾಗಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.