ಬರ್ತಡೇ ವೇಳೆ ಬ್ಯಾರಿಕೇಡ್ ಮುರಿದು ನುಗ್ಗಿದ ಅಭಿಮಾನಿಗಳು; ಭೇಟಿ ಅರ್ಧಕ್ಕೆ ನಿಲ್ಲಿಸಿ ಹೊರಟು ಹೋದ ಕಿಚ್ಚ ಸುದೀಪ್

Published : Sep 02, 2023, 08:13 PM ISTUpdated : Sep 02, 2023, 08:15 PM IST

ಸ್ಯಾಂಡಲ್ ವುಡ್ ಬಾದ್ ಶಾ, ಅಭಿಮಾನಿಗಳ ಪಾಲಿನ ಪ್ರೀತಿಯ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಇಂದು ಸೆಪ್ಟೆಂಬರ್ 2ರಂದು 50ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಕಿಚ್ಚ ಸುದೀಪ್ ಅರ್ಧಕ್ಕೆ ಮನೆಗೆ ಹೊರಟುಹೋದ ಘಟನೆ ನಡೆಯಿತು. 

PREV
14
ಬರ್ತಡೇ ವೇಳೆ ಬ್ಯಾರಿಕೇಡ್ ಮುರಿದು ನುಗ್ಗಿದ ಅಭಿಮಾನಿಗಳು; ಭೇಟಿ ಅರ್ಧಕ್ಕೆ ನಿಲ್ಲಿಸಿ ಹೊರಟು ಹೋದ ಕಿಚ್ಚ ಸುದೀಪ್

ಕಳೆದ ರಾತ್ರಿಯಿಂದಲೇ ಸಹಸ್ರ ಸಂಖ್ಯೆಯಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡು ಹುಟ್ಟುಹಬ್ಬದ ಶುಭಕೋರಲು ಬೆಂಗಳೂರಿಗೆ ಬರುತ್ತಿದ್ದಾರೆ. ಈ ಬಾರಿ ಕಿಚ್ಚ ಸುದೀಪ್ ತಮ್ಮ ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೊಂದಿಗೆ ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ಸ್ ನಲ್ಲಿ ಅದ್ದೂರಿ ಸಮಾರಂಭದ ನಡುವೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

24

ನಿನ್ನೆ ಶುಕ್ರವಾರ ರಾತ್ರಿ ನಂದಿ ಲಿಂಕ್ ಗ್ರೌಂಡ್‍ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಸಂಭ್ರಮದಲ್ಲಿ ಭಾಗಿಯಾಗಿದರು. ಸುದೀಪ್ ಪತ್ನಿ ಪ್ರಿಯಾ, ಪುತ್ರಿ ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು ಭಾಗಿಯಾಗಿ ಕೇಕ್ ತಿನ್ನಿಸಿ, ಶುಭಕೋರಿದರು.

34

ಹುಟ್ಟು ಹಬ್ಬವೇಳೆ ರಾಜ್ಯದ ಮೂಲೆಮೂಲೆಗಳಿಂದ ಬಂದಿದ್ದ ಸಾವಿರಾರು ಅಭಿಮಾನಿಗಳು ನೆಚ್ಚಿನ ನಟನಿಗೆ ವಿಶ್ ಕೈಕುಲುಕಿ ಸೇಲ್ಫಿ ತೆಗೆದುಕೊಳ್ಳಲು ಕಾತರದಿಂದ ಕಾದಿದ್ದರು. ಮೊದಲಿಗೆ ಭದ್ರತಾ ವ್ಯವಸ್ಥೆ ಎಲ್ಲವೂ ಚೆನ್ನಾಗಿ ಬಳಿಕ ಕಿಚ್ಚ ಅಭಿಮಾನಿಗಳ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಿ ಭದ್ರತೆಗೆ ಸವಾಲು ಆಯಿತು. 
 

44

ಈ ವೇಳೆ ಅಭಿಮಾನಿಗಳ ಮಧ್ಯೆ ನೂಕುನುಗ್ಗಲು ಉಂಟಾಗಿ ಬ್ಯಾರಿಕೇಡ್ ಮುರಿದು ಸುದೀಪ್ ಅವರತ್ತ ನುಗ್ಗಿದ ಘಟನೆ ನಡೆಯಿತು. ಈ ವೇಳೆ ಭದ್ರತಾ ಸಿಬ್ಬಂದಿ ಕೂಡ ನಿಯಂತ್ರಿಸಲು ಅಸಾಧ್ಯವಾಯಿತು.ಹೀಗಾಗಿ ಅಭಿಮಾನಿಗಳೊಂದಿಗೆ ಭೇಟಿ ಅರ್ಧಕ್ಕೆ ಮೊಟಕುಗೊಳಿಸಿ ಹೊರಡಬೇಕಾಯಿತು. ಈ ಘಟನೆ ಬಳಿಕ ಇನ್‌ಸ್ಟಾಗ್ರಾಮ್ ಮೂಲಕ ಮಾತನಾಡಿರುವ ಕಿಚ್ಚ ಸುದೀಪ, ಅಭಿಮಾನಿಗಳ ಕ್ಷಮೆ ಕೇಳಿದ್ದಾರೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories