ಆದಿಪುರುಷ್ ಸಿನಿಮಾ ರಿಲೀಸ್ ಆದಾಗಿಂದ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. ಓಂ ರಾವುತ್ ನಿರ್ದೇಶನ, ಸಿನಿಮಾದ ಡೈಲಾಗ್ಸ್, ವಿಎಕ್ಸ್‌ಎಫ್ ಸೇರಿದಂತೆ ಅನೇಕ ವಿಚಾರಗಳಿಗೆ ಆದಿಪುರುಷ್ ಟ್ರೋಲ್ ಆಗುತ್ತಿದೆ. ಸಿನಿಮಾ ರಿಲೀಸ್ ಆದ ಬಳಿಕ ಪ್ರಭಾಸ್ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಆದರೆ ಕೃತಿ ಸಿನಿಮಾ ಸ್ಟ್ರೀಮಿಂಗ್ ಸೇರಿದಂತೆ ಪ್ರಚಾರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.