ಬಾತ್‌ರೂಮ್‌ ಬೋಲ್ಡ್‌ ಫೋಟೋಸ್ ಹಂಚಿಕೊಂಡ ಅನುಪಮಾ, ಮೊದ್ಲು ಮಿರರ್ ಕ್ಲೀನ್ ಮಾಡಮ್ಮ ಎಂದ ನೆಟ್ಟಿಗರು!

First Published | Dec 27, 2023, 1:09 PM IST

ಮಲಯಾಳಂ ಖ್ಯಾತ ನಟಿ ಅನುಪಮಾ ಪರಮೇಶ್ವರನ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಆಗಾಗ ತಮ್ಮ ಹಾಟ್ ಫೋಟೋಸ್‌ನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡ್ತಿರ್ತಾರೆ. ಸದ್ಯ ಬಾತ್‌ರೂಮ್‌ನ ಬೋಲ್ಡ್‌ ಫೋಟೋಸ್ ಶೇರ್ ಮಾಡಿದ್ದಾರೆ.

ಮಲಯಾಳಂ ಖ್ಯಾತ ನಟಿ ಅನುಪಮಾ ಪರಮೇಶ್ವರನ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಆಗಾಗ ತಮ್ಮ ಹಾಟ್ ಫೋಟೋಸ್‌ನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡ್ತಿರ್ತಾರೆ. ಸದ್ಯ ಬಾತ್‌ರೂಮ್‌ನ ಬೋಲ್ಡ್‌ ಫೋಟೋಸ್ ಶೇರ್ ಮಾಡಿದ್ದಾರೆ.

ಅನುಪಮಾ ಪರಮೇಶ್ವರನ್ ಸದ್ಯ ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದಕ್ಷಿಣ ಭಾರತದ ಎಲ್ಲಾ ಭಾಷೆಯ ಸಿನಿಮಾಗಳನ್ನು ಮಾಡಿರುವ ನಟಿ ಅನುಪಮಾ ಆಗಾಗ ಫೋಟೋಶೂಟ್ ಮಾಡಿಸಿಕೊಳ್ಳುತ್ತಾ ಅಭಿಮಾನಿಗಳ ಮನಗೆಲ್ಲುತ್ತಿರುತ್ತಾರೆ. 

Tap to resize

ಈಗ ಲೇಟೆಸ್ಟ್ ಆಗಿ ಬಾತ್‌ರೂಮ್‌ನಲ್ಲಿ ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಶೇರ್ ಮಾಡಿದ್ದಾರೆ. ಬ್ಲ್ಯಾಕ್‌ ಕಲರ್ ಸ್ಲೀವ್‌ಲೆಸ್‌ ಟಾಪ್ ಹಾಕ್ಕೊಂಡು ಅನುಪಮಾ ಹಾಟ್ ಹಾಟ್ ಫೋಸ್‌ ಕೊಟ್ಟಿದ್ದಾರೆ. ಕೂದಲನ್ನು ಎತ್ತಿ ಕಟ್ಟಿ, ಫೋಟೋಗಳಿಗೆ ಫೋಸ್ ನೀಡಿದ್ದು, ಈ ಫೋಟೋಸ್‌ಗೆ ನೆಟ್ಟಿಗರು ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ.

ಒಬ್ಬ ಬಳಕೆದಾರರು, 'ಮೊದಲು ಮಿರರ್ ಕ್ಲೀನ್ ಮಾಡ್ಕೊಳ್ಳಿ' ಎಂದು ಕಮೆಂಟಿಸಿದ್ದಾರೆ. ಇನ್ನೊಬ್ಬರು, 'ಟೂ ಲೇಝಿ ಟು ಕ್ಲೀನ್ ಮಿರರ್‌' ಎಂದು ಹೇಳಿದ್ದಾರೆ. ಮತ್ತೊಬ್ಬರು, 'ಡರ್ಟಿ ಮಿರರ್, ಬ್ಯೂಟಿ ವುಮೆನ್' ಎಂದಿದ್ದಾರೆ. ಮತ್ತೆ ಹಲವರು ಹಾಟಿ, ಬ್ಯೂಟಿಫುಲ್ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ.

ನಟಿ ಅನುಪಮಾ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡದಿದ್ದರೂ ಅನೇಕ ಸಿನಿಮಾಗಳು ವಿಮರ್ಶಾತ್ಮಕವಾಗಿ ಮೆಚ್ಚುಗೆ ಗಳಿಸಿವೆ. ಮಲಯಾಳಂನ ಸೂಪರ್ ಹಿಟ್ ಪ್ರೇಮ್ ಸಿನಿಮಾ ಮೂಲಕ ಅನುಪಮಾ ಸಿನಿಮಾ ರಂಗಕ್ಕೆ ಕಾಲಿಟ್ಟರು.

ಮೊದಲ ಸಿನಿಮಾವೆ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತು. ಮೇರಿ ಜಾರ್ಜ್ ಪಾತ್ರದ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದರು. ಬಳಿಕ ಅನುಪಮಾ ಬೇರೆ ಬೇರೆ ಭಾಷೆಗಳಲ್ಲಿ ಮಿಂಚಿದರು. ಕನ್ನಡ ಸಿನಿಮಾದಲ್ಲೂ ನಟಿಸಿದ್ದಾರೆ. 

 ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅನುಪಮಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

ಅನುಪಮಾ ಪರಮೇಶ್ವರನ್‌ ಆಗಾಗ ಬಿಡುವು ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಜೊತೆ ಮಾತನಾಡುತ್ತಾರೆ. ಅಭಿಮಾನಿಗಳು ಮುಂದಿಡುವ ಡಿಮ್ಯಾಂಡ್‌ಗಳಿಗೆ ಉತ್ತರ ನೀಡುತ್ತಾರೆ. ಎಲ್ಲರಿಗೂ ತಪ್ಪದೆ ಪ್ರತಿಕ್ರಿಯೆ ನೀಡುತ್ತಾರೆ.

ಬರೀ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಳ್ಳುತ್ತೀರಾ, ಬಿಕಿನಿ ಫೋಟೋ ಎಲ್ಲಿ ಎಂದು ಹೇಳಿದವನಿಗೆ ಈ ಹಿಂದೆ ಅನುಮಪಾ ಖಡಕ್ ಆಗಿ ಉತ್ತರ ಕೊಟ್ಟಿದ್ದರು.  'ಬಿಕಿನಿ ಫೋಟೋ ಬೇಕಾ? ನಿಮ್ಮ ವಿಳಾಸ ಕಳುಹಿಸಿ ನಾನು ಫೋಟೋ ಕಳುಹಿಸುತ್ತೇನೆ. ಅದಕ್ಕೆ ಫ್ರೇಮ್ ಹಾಕಿಸಿ ನಿಮ್ಮ ಮನೆಯ ಗೋಡೆಯಲ್ಲಿ ಹಾಕಿಕೊಳ್ಳಿ,' ಎಂದು ಹೇಳಿದ್ದು ವೈರಲ್ ಆಗಿತ್ತು.

Latest Videos

click me!