ಮೀರಾ ಸಿನಿಮಾ ವಿಚಾರಕ್ಕೆ ಬರುವುದಾದರೆ 2001ರಲ್ಲಿಯೇ ಮೀರಾ ಬಣ್ಣದ ಲೋಕಕ್ಕೆ ಕಾಲಿಟ್ಟರು. ಮಲಯಾಳಂ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಮೀರಾ ಬಳಿಕ ತಮಿಳು, ತೆಲುಗು ಮತ್ತು ಕನ್ನಡದಲ್ಲಿ ಪ್ರಸಿದ್ಧರಾಗಿದ್ದಾರೆ. ಕನ್ನಡದಲ್ಲಿ ಮೀರಾ ಪುನೀತ್ ರಾಜ್ ಕುಮಾರ್ ಜೊತೆ ಮಯೂರ, ಅರಸು ಮತ್ತು ಶಿವರಾಜ್ ಕುಮಾರ್ ಜೊತೆ ದೇವರು ಕೊಟ್ಟ ತಂಗಿ ಸೇರಿದಂತೆ ಇನ್ನು ಕೆಲವು ಸಿನಿಮಾಗಳಲ್ಲಿ ನಟಿಸದ್ದಾರೆ.