ರಾಮ್ ಚರಣ್ ಆರ್‌ಆರ್‌ಆರ್ ನಂತರ ಆಚಾರ್ಯ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿರಂಜೀವಿ ನಾಯಕರಾಗಿ ನಟಿಸಿದ್ದ ಈ ಚಿತ್ರ ಫ್ಲಾಫ್ ಆಯಿತು. ಸದ್ಯ ರಾಮ್ ಅವರು `ಗೇಮ್ ಚೇಂಜರ್` ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಂಕರ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣದ ಹಂತದಲ್ಲಿದ್ದು, ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ರಾಮ್ ಚರಣ್‌ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಶ್ರೀಕಾಂತ್, ಎಸ್ ಜೆ ಸೂರ್ಯ, ಅಂಜಲಿ, ಸುನಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ರಾಜಕೀಯ ಥ್ರಿಲ್ಲರ್ ಆಗಿ ಈ ಚಿತ್ರ ನಿರ್ಮಾಣವಾಗುತ್ತಿದೆ. ದಿಲ್ ರಾಜು ಸುಮಾರು 350 ಕೋಟಿ ರೂಪಾಯಿ ಬಜೆಟ್‌ನಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವುದು ವಿಶೇಷ.