ಸ್ಯಾಂಡಲ್ ವುಡ್ ನ ಡಾರ್ಲಿಂಗ್ ಜೋಡಿ ಎಂದೇ ಖ್ಯಾತಿಗಳಿಸಿರುವ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಸದ್ಯ ಲವ್ ಮಾಕ್ಟೇಲ್-2 ಯಶಸ್ಸಿನಲ್ಲಿದ್ದಾರೆ. ಮೊದಲ ಭಾಗ ಸೂಪರ್ ಹಿಟ್ ಆದ ಬಳಿಕ ಪಾರ್ಟ್-2ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೇ ಖುಷಿಯಲ್ಲೇ ಡಾರ್ಲಿಂಗ್ ಜೋಡಿ ವಿದೇಶಕ್ಕೆ ಹಾರಿದೆ. ಹೌದು, ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ ಇಬ್ಬರು ಸಿಂಗಾಪುರದಲ್ಲಿದ್ದಾರೆ.
ಸಿಂಗಾಪುರ ಪ್ರವಾಸದ ಸುಂದರ ಫೋಟೋಗಳನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಹಂಚಿಕೊಂಡಿದ್ದಾರೆ. ಇಬ್ಬರ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಿಂಗಾಪುರದ ಸುಂದರ ಸ್ಥಳಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿರುವ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಇಬ್ಬರೂ ರಜೆಯನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ.
ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಲವ್ ಮಾಕ್ಟೇಲ್ ಸಿನಿಮಾ ಬಳಿಕ ಸೂಪರ್ ಹಿಟ್ ಜೋಡಿಯಾಗಿ ಹೊರಹೊಮ್ಮಿದ್ದರು. ಈ ಸಿನಿಮಾ ಬಳಿಕ ತಮ್ಮ ಪ್ರೀತಿ ವಿಚಾರ ಬಹಿರಂಗ ಪಡಿಸಿದ್ದ ಮಿಲನಾ ಮತ್ತು ಕೃಷ್ಣ ಇಬ್ಬರೂ ಕಳೆದ ವರ್ಷ ಹಸೆಮಣೆ ಏರಿದರು.
ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುವ ಜೊತೆಗೆ ನಿರ್ದೇಶಕನಾಗಿಯೂ ಗುರುತಿಸಿಕೊಂಡರು. ನಟನೆ ಮತ್ತು ನಿರ್ದೇಶನ ಎರಡರಲ್ಲೂ ಸಕ್ಸಸ್ ಕಂಡಿರುವ ಕೃಷ್ಣ ಪಾರ್ಟ್-2ನಲ್ಲೂ ಸೂಪರ್ ಸಕ್ಸಸ್ ಆದರು.
ಲವ್ ಮಾಕ್ಟೇಲ್-2 ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದಲ್ಲದೇ ಬಾಕ್ಸ್ ಆಫೀಸ್ ನಲ್ಲೂ ಭರ್ಜರಿ ಕಲೆಕ್ಷನ್ ಮಾಡಿದೆ. ಸದಾ ಸಿನಿಮಾ ಕೆಲಸಗಳಲ್ಲಿ ಬ್ಯಸಿಯಾಗಿರುತ್ತಿದ್ದ ಈ ಜೋಡಿ ಸದ್ಯ ಬಿಡುವು ಮಾಡಿಕೊಂಡು ವಿದೇಶಕ್ಕೆ ಪಯಣ ಬೆಳೆಸಿದೆ.
ಕೃಷ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೊನೆಯದಾಗಿ ಲವ್ ಮಾಕ್ಟೇಲ್-2 ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಕೃಷ್ಣ ಸದ್ಯ ಲೋಕಲ್ ಟ್ರೈನ್, ಶುಗರ್ ಫ್ಯಾಕ್ಟರಿ, ಬ್ಯಾಚುಲರ್, ಲಕ್ಕಿ ಮ್ಯಾನ್, ಲವ್ ಮಿ ಆರ್ ಹೇಟ್ ಮಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
ಮಿಲನಾ ನಾಗರಾಜ್ ಸಹ ಲವ್ ಮಾಕ್ಟೇಲ್ ಸಿನಿಮಾ ಬಳಿಕ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. For Regn, ಬ್ಯಾಚುಲರ್, ಓ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮಿಲನಾ ಕೂಡ ಕೊನೆಯದಾಗಿ ಲವ್ ಮಾಕ್ಟೇಲ್-2 ಮೂಲಕ ಕೊನೆಯದಾಗಿ ಅಭಿಮಾನಿಗಳ ಮುಂದೆ ಬಂದಿದ್ದಾರೆ.