Mission majnu; ಮತ್ತೆ ಪಾಕಿಸ್ತಾನಿ ಯುವತಿ ಪಾತ್ರದಲ್ಲಿ ರಶ್ಮಿಕಾ; ಸಿದ್ದಾರ್ಥ್ ಜೊತೆ ಸಖತ್ ರೊಮ್ಯಾನ್ಸ್

First Published | Jan 10, 2023, 5:34 PM IST

ಮಿಷನ್ ಮಜ್ನು ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ರಶ್ಮಿಕಾ ಮಂದಣ್ಣ ಪಾಕಿಸ್ತಾನಿ ಯುವತಿ ಪಾತ್ರದಲ್ಲಿ ನಟಿಸಿದ್ದಾರೆ. 

ನಟಿ ರಶ್ಮಿಕಾ ಮಂದಣ್ಣ ನಟನೆಯ ಮೊದಲ ಹಿಂದಿ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಮಿಷಶ್ ಮಜ್ನು ಸಿನಿಮಾ ಮೂಲಕ ರಶ್ಮಿಕಾ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದರು. ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ರಶ್ಮಿಕಾ ತೆರೆ ಹಂಚಿಕೊಂಡಿದ್ದರು. ಇದೀಗ ಮಿಷನ್ ಮಜ್ನು ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. 
 

ಭಾರಿ ನಿರೀಕ್ಷೆ ಇಟ್ಟುಕೊಂಡಿರುವ ಮಿಷನ್ ಮಜ್ನು ಸಿನಿಮಾದ ಟ್ರೈಲರ್ ಕುತೂಹಲ ಮತ್ತಷ್ಟು ಹೆಚ್ಚಿಸಿದೆ. ಅಂದಹಾಗೆ ಈ ಸಿನಿಮಾದಲ್ಲಿ ರಶ್ಮಿಕಾ ಮತ್ತೆ ಪಾಕಿಸ್ತಾನದ ಯುವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೊದಲು ಸೀತಾ ರಾಮಂ ಸಿನಿಮಾದಲ್ಲೂ ರಶ್ಮಿಕಾ ಪಾಕ್ ಯುವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು. ಇದೀಗ ಮತ್ತೆ ಪಾಕ್ ಯುವತಿಯಾಗಿ ಅಭಿಮಾನಿಗಳ ಮುಂದಿ ಬರ್ತಿದ್ದಾರೆ. 

Tap to resize

ಸದ್ಯ ರಿಲೀಸ್ ಆಗಿರುವ ಟ್ರೈಲರ್ ನಲ್ಲಿ ಸಿದ್ಧಾರ್ಥ್ ಮತ್ತು ರಶ್ಮಿಕಾ ಲವ್ ಸ್ಟೋರಿ ಹೈಲೆಟ್ ಆಗಿದೆ. ಇಬ್ಬರ ರೊಮ್ಯಾಂಟಿಂಕ್ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳ ಹೃದಯ ಗೆದ್ದಿದೆ. ಒಂದು ವೇಳೆ ಈ ಸಿನಿಮಾ ಹಿಟ್ ಆದರೆ ಬಾಲಿವುಡ್​ನಲ್ಲಿ ರಶ್ಮಿಕಾ ಡಿಮ್ಯಾಂಡ್​ ಮತ್ತಷ್ಟು ಹೆಚ್ಚಾಗಲಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಮಿಷನ್​ ಮಜ್ನು’ ಸಿನಿಮಾ ದೊಡ್ಡ ಪರದೆಯಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಒಟಿಟಿಯಲ್ಲಿ ರಿಲೀಸ್​ ಆಗಲಿದೆ. ಜನವರಿ 20ರಿಂದ ನೆಟ್​ಫ್ಲಿಕ್ಸ್​ನಲ್ಲಿ ಸ್ಟ್ರೀಮಿಂಗ್​ ಶುರುವಾಗಲಿದೆ.
 

‘ಮಿಷನ್​ ಮಜ್ನು’ ನೈಜ ಘಟನೆಗಳನ್ನು ಆಧರಿಸಿದ ಚಿತ್ರವಾಗಿದ್ದು ರಿಲೀಸ್‌ಗೆ ಸಜ್ಜಾಗಿದೆ. ಆ ಕಾರಣದಿಂದಲೂ ಈ ಚಿತ್ರದ ಮೇಲಿನ ಹೈಪ್​ ಹೆಚ್ಚಿದೆ. ರಶ್ಮಿಕಾ ಮಂದಣ್ಣ ಮತ್ತು ಸಿದ್ದಾರ್ಥ ಮಲ್ಹೋತ್ರ ನಡುವಿನ ಕೆಮಿಸ್ಟ್ರೀ ನೋಡಲು ಫ್ಯಾನ್ಸ್ ಕಾದಿದ್ದಾರೆ. ಟ್ರೈಲರ್ ಮತ್ತು ಹಾಡಿನ ಮೂಲಕ ಕುತೂಹಲ ಹೆಚ್ಚಿಸಿರುವ ಮಿಷನ್ ಮಜ್ನು ಹೇಗಿರಲಿದೆ ಎನ್ನುವ ಕುತೂಹಲಕ್ಕೆ ಜನವರಿ 20ರಂದು ತೆರೆಬೀಳಲಿದೆ.

ರಶ್ಮಿಕಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಿಂದಿಯಲ್ಲಿ ಈಗಾಗಲೇ ಗುಡ್ ಬೈ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಆದರೆ ಆ ಸಿನಿಮಾ ಹೇಳಿ ಕೊಳ್ಳುವಷ್ಟು ಸಕ್ಸಸ್ ಕಂಡಿಲ್ಲ. ಗುಡ್ ಬೈ ಸಿನಿಮಾಗೂ ಮೊದಲು ರಶ್ಮಿಕಾ ಒಪ್ಪಿಕೊಂಡ ಮಿಷನ್ ಮಜ್ನು ಇದೀಗ ರಿಲೀಸ್‌ ಆಗುತ್ತಿದೆ. ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. 
 

Latest Videos

click me!