ರಾಕೇಶ್ ಓಂಪ್ರಕಾಶ್ ಮೆಹ್ರಾ ಅವರು ಯುರೇಕಾ ಫೋರ್ಬ್ಸ್‌ಗಾಗಿ ವ್ಯಾಕ್ಯೂಮ್ ಕ್ಲೀನರ್‌ಗಳನ್ನು ಮಾರಾಟ ಮಾಡುವ ಮೂಲಕ ಪ್ರಾರಂಭಿಸಿದರು. ನಂತರ I986ರಲ್ಲಿ, ಫ್ಲಿಕ್ಸ್ ಮೋಷನ್ ಪಿಕ್ಚರ್ ಕಂಪನಿ ಪ್ರೈವೇಟ್ ಲಿಮಿಟೆಡ್‌ನ್ನು ಸ್ಥಾಪಿಸಿದರು. ಜಾಹೀರಾತು ನಿರ್ದೇಶಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಕೋಕ್, ಪೆಪ್ಸಿ, ಟೊಯೋಟಾ, ಅಮೇರಿಕನ್ ಎಕ್ಸ್‌ಪ್ರೆಸ್‌ನಂತಹ ಭಾರತೀಯ ಮತ್ತು ಅಂತಾರಾಷ್ಟ್ರೀಯ ಬ್ರಾಂಡ್‌ಗಳಿಗಾಗಿ ಹಲವಾರು ಜಾಹೀರಾತುಗಳನ್ನು ನಿರ್ದೇಶಿಸಿದ್ದಾರೆ.