ಪೂಜಾ ಹೆಗ್ಡೆ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ ಮತ್ತು ಸೌತ್ ಎರಡೂ ಕಡೆ ಬ್ಯುಸಿ ಇರುವ ಪೂಜಾ ಸದ್ಯ ಸರ್ಕಸ್ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈ ನಡುವೆ ಸಲ್ಮಾನ್ ಖಾನ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.
ಪೂಜಾ ಹೆಗ್ಡೆ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ ಮತ್ತು ಸೌತ್ ಎರಡೂ ಕಡೆ ಬ್ಯುಸಿ ಇರುವ ಪೂಜಾ ಸದ್ಯ ಸರ್ಕಸ್ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ರೋಹಿತ್ ಶೆಟ್ಟಿ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸರ್ಕಸ್ ಸಿನಿಮಾದಲ್ಲಿ ಪೂಜಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
26
ಪೂಜಾ ಹೆಗ್ಡೆ ಇತ್ತೀಚಿಗೆ ಸಿನಿಮಾಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ಹೌದು ಪೂಜಾ ಕಳೆದ ಕೆಲವು ದಿನಗಳಿಂದ ಪ್ರೀತಿ-ಪ್ರೇಮದ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ವೈರಲ್ ಆಗಿದೆ. ಆದರೇ ಈ ಬಗ್ಗೆ ಸಲ್ಮಾನ್ ಆಗಲಿ ಅಥವಾ ಪೂಜಾ ಹೆಗ್ಡೆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
36
ಸದ್ಯ ಪೂಜಾ ಹೆಗ್ಡೆ ಸರ್ಕಸ್ ಸಿನಿಮಾದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಪೂಜಾ ಹೆಗ್ಡೆ ಇತ್ತೀಚಿಗಷ್ಟೆ ಸೀರೆ ಫೋಟೋ ಶೇರ್ ಮಾಡಿದ್ದಾರೆ. ಗೋಲ್ಡನ್ ಬಣ್ಣದ ಸೀರೆ ಧರಿಸಿರುವ ಪೂಜಾ ಹೆಗ್ಡೆ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
46
ಪೂಜಾ ಹೆಗ್ಡೆ ಫೋಟೋಗಳಿಗೆ ಅಭಿಮಾನಿಗಳಿಂದ ತರಹೇವಾರಿ ಕಾಮೆಂಟ್ ಹರಿದುಬರುತ್ತಿವೆ. ಸಖತ್ ಹಾಟ್, ಬ್ಯೂಟಿ ಎಂದು ಕಾಮೆಂಟ್ ಮಾಡಿ ಪ್ರೀತಿ ಹೊರಹಾಕುತ್ತಿದ್ದಾರೆ. ಇನ್ನೂ ಕೆಲವರು ಸಲ್ಮಾನ್ ಖಾನ್ ಜೊತೆ ಡೇಟಿಂಗ್ ಮಾಡುತ್ತಿದ್ದಾರಾ? ಎಂದು ಪ್ರಶ್ನೆ ಮಾಡಿದ್ದಾರೆ.
56
ಸರ್ಕಸ್ ಸಿನಿಮಾದಲ್ಲಿ ಪೂಜಾ ಹೆಗ್ಡೆ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ವರುಣ್ ಶರ್ಮಾ ಮತ್ತು ರಣ್ವೀರ್ ಸಿಂಗ್ ನಾಯಕರಾಗಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್ ರಿಲೀಸ್ ಆಗಿದ್ದು ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
66
ಅಂದಹಾಗೆ ರಣ್ವೀರ್ ಸಿಂಗ್ ಅವರ ಸರ್ಕಸ್ ಸಿನಿಮಾ ಡಿಸೆಂಬರ್ 23 ರಂದು ರಿಲೀಸ್ ಆಗುತ್ತಿದೆ. ಈ ಚಿತ್ರವನ್ನು ರೋಹಿತ್ ಶೆಟ್ಟಿ ನಿರ್ದೇಶನದ ಜೊತೆಗೆ ಅವರದ್ದೇ ಆದ ರೋಹಿತ್ ಶೆಟ್ಟಿ ಪಿಕ್ಚರ್ಸ್ ನಿರ್ಮಿಸಿದೆ.