ಪ್ರಭಾಸ್ ಜತೆ ಯಶ್.. ನೀಲ್ ಸಹ ಇದ್ದಾರೆ? ಏನ್ ಹೊಸ ಪ್ರಾಜೆಕ್ಟು?

Published : Jan 15, 2021, 04:53 PM IST

ಹೈದರಾಬಾದ್(ಜ. 15) ಪ್ರಭಾಸ್‌ ನಟನೆಯ ಸಲಾರ್‌ ಚಿತ್ರಕ್ಕೆ ಮುಹೂರ್ತ ನೆರವೇರಿದೆ.  ಹೈದರಾಬಾದ್‌ನಲ್ಲಿ ಕನ್ನಡ-ತೆಲುಗು ಚಿತ್ರರಂಗಳ ಮಹಾ ಸಮ್ಮಿಲನವಾಗಿದ್ದು ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಪ್ರಭಾಸ್‌, ವಿಜಯ್‌ ಕಿರಗಂದೂರು, ಪ್ರಶಾಂತ್‌ ನೀಲ್‌ ಭಾಗಿಯಾಗಿದ್ದರು.

PREV
117
ಪ್ರಭಾಸ್ ಜತೆ ಯಶ್.. ನೀಲ್ ಸಹ ಇದ್ದಾರೆ? ಏನ್ ಹೊಸ ಪ್ರಾಜೆಕ್ಟು?

ಹೈದರಾಬಾದ್‌ನ ರಾಮಾನಾಯ್ಡು ಸ್ಟುಡಿಯೋದಲ್ಲಿ ಮುಹೂರ್ತ ನೆರವೇರಿದೆ. 

217

ಬಾಹುಬಲಿ ಖ್ಯಾತಿಯ ಪ್ರಭಾಸ್‌ ನಟಿಸುತ್ತಿರುವ, ʼಕೆಜಿಎಫ್‌ʼ ಚಿತ್ರದಂಥ ಬಿಗ್‌ ಬಜೆಟ್‌ ಇಂಡಿಯನ್‌ ಸಿನಿಮಾವನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಮ್ಸ್‌ನ ವಿಜಯ್‌ ಕಿರಗಂದೂರು ಅವರು ನಿರ್ಮಿಸುತ್ತಿರುವ ಹಾಗೂ ಅದೇ ʼಕೆಜಿಎಫ್‌ʼ  ಚಾಪ್ಟರ್  2 ಕಟ್ಟಿಕೊಡುತ್ತಿರುವ  ಪ್ರಶಾಂತ್‌ ನೀಲ್‌ ನಿರ್ದೇಶನದ ʼಸಲಾರ್‌ʼ ಚಿತ್ರಕ್ಕೆ ರಾಮಾನಾಯ್ಡು ಸ್ಟುಡಿಯೋದಲ್ಲಿ ಚಾಲನೆ ನೀಡಲಾಯಿತು.

317

ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮುಹೂರ್ತದ ಪೂಜೆ ನೆರವೇರಿತು. ನಾಯಕ ಪ್ರಭಾಸ್‌, ತೆಲುಗು ಮತ್ತು ಕನ್ನಡ ಚಿತ್ರರಂಗಗಳ ಅನೇಕ ಗಣ್ಯರು, ತಾರೆಯರು ಪಾಲ್ಗೊಂಡು ಶುಭ ಹಾರೈಸಿದರು. ʼ

417

ಸಲಾರ್‌ʼ ಚಿತ್ರದ ಮುಹೂರ್ತದ ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತು.

517

ಡಾ.ಸಿಎ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಹೊಂಬಾಳೆ ಅಡಿಯಲ್ಲಿ ʼಕೆಜಿಎಫ್ ಚಾಪ್ಟರ್‌-1ʼ, ʼಕೆಜಿಎಫ್‌ ಚಾಪ್ಟರ್-‌2ʼ ಅದಕ್ಕೂ ಹಿಂದೆ ಇನ್ನು ಹಲವು ಯಶಸ್ವಿ ಚಿತ್ರ

617

ಗಳನ್ನು ನಿರ್ಮಾಣ ಮಾಡಿರುವ ವಿಜಯ್‌ ಕಿರಗಂದೂರು ʼಸಲಾರ್‌ʼ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

717

ಹಾಗೆಯೇ ಕೆಜಿಎಫ್‌ ಸರಣಿ ಚಿತ್ರಗಳ ಮೂಲಕ ಇಡೀ ಭಾರತೀಯ ಚಿತ್ರರಂಗವೇ ಕನ್ನಡ ಚಿತ್ರರಂಗದತ್ತ ನೋಡುವಂತೆ ಮಾಡಿದ ಪ್ರಶಾಂತ್‌ ನೀಲ್‌ ಅವರು ʼಸಲಾರ್‌ʼ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎಂದರು.

817

ಅದರಲ್ಲೂ ಪ್ರಭಾಸ್‌ ಅವರ ಈ ಚಿತ್ರ ಮಾಡುತ್ತಿರುವುದು ತುಂಬಾ ಸಂತೋಷ ಉಂಟು ಮಾಡಿದೆ. ಈ ಮೂಲಕ ಭಾಷೆ, ಗಡಿಗಳನ್ನು ಮೀರಿ ಕನ್ನಡ-ತೆಲುಗು ಚಿತ್ರರಂಗಗಳು ಒಂದಾಗಿ ಮುಂದೆ ಹೋಗುತ್ತಿರುವುದಕ್ಕೆ ಆನಂದವಾಗಿದೆ ಎಂದು ಬಾಹುಬಲಿ ನೆನೆದರು.

917

ನಾನು ʼಬಾಹುಬಲಿʼ ಚಿತ್ರವನ್ನು ನೋಡಿ ಪ್ರಭಾಸ್‌ ಅವರಿಗೆ ಫಿದಾ ಆಗಿದ್ದೆ. ಈಗ ಅವರ ಜತೆಯಲ್ಲೇ ಸಿನಿಮಾ ಮಾಡುವ ಅವಕಾಶ ಸಿಕ್ಕಿದೆ. ಇದರಿಂದ ನನಗೆ ತುಂಬಾ ಖುಷಿಯಾಗಿದೆ. ಈ ಮೂಲಕ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ʼಸಲಾರ್‌ʼ ಚಿತ್ರವನ್ನು ತಯಾರು ಮಾಡುತ್ತಿದ್ದೇವೆ.

1017

ನಮ್ಮ ʼಕೆಜಿಎಫ್‌ʼ ಚಿತ್ರವನ್ನು ಡೈರೈಕ್ಟ್‌ ಮಾಡಿರುವ ಪ್ರಶಾಂತ್‌ ನೀಲ್‌ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎಂದರು ನಿರ್ಮಾಪಕ ವಿಜಯ್‌ ಕಿರಗಂದೂರು.

1117

ʼಸಲಾರ್‌ʼ ಚಿತ್ರಕ್ಕೆ ಪ್ರಭಾಸ್‌ ಅವರ ಹೊರತಾಗಿ ನಾಯಕ ನಟಿ, ಇನ್ನಿತರೆ ತಾರಾಬಳಗ ಆಯ್ಕೆಯಾಗಿಲ್ಲ. ಚಿತ್ರವನ್ನು ಅನೌನ್ಸ್‌ ಮಾಡಿದಾಗ ಹೊರಬಿದ್ದ ಸಲಾರ್‌ ಫಸ್ಟ್‌ಲುಕ್‌ ದೇಶದೆಲ್ಲೆಡೆ ವೈರಲ್‌ ಆಗಿತ್ತು. 

1217

ಪ್ರಭಾಸ್‌ ಈಗಾಗಲೇ ʼರಾಧೆ ಶ್ಯಾಂʼ ಚಿತ್ರದಲ್ಲಿ ನಟಿಸುತ್ತಿದ್ದು, ಅದರ ಚಿತ್ರೀಕರಣ ಕೊನೆ ಹಂತದಲ್ಲಿದೆ. ʼಆದಿಪುರುಷ್‌ʼ ಚಿತ್ರದ ಶೂಟಿಂಗ್‌ ಇನ್ನೇನು ಆರಂಭವಾಗಬೇಕಿದೆ. ಇದರ ಜತೆಯಲ್ಲೇ ಈಗ ʼಸಲಾರ್‌ʼ ಚಿತ್ರವೂ ಟೇಕಾಫ್‌ ಆಗಿದೆ. 

1317

ನಟ ಯಶ್, ರವಿ ಬಸ್ರೂರ್​, ಭುವನ್​ ಗೌಡ ಸೇರಿದಂತೆ ಕೆಜಿಎಫ್‌ ಚಿತ್ರತಂಡದ ಅನೇಕರು ಪಾಲ್ಗೊಂಡಿದ್ದರು. ಅದರಲ್ಲೂ ಯಶ್‌ ಪ್ರಮುಖ ಆಕರ್ಷಣೆಯಾಗಿದ್ದರು.

1417

ʼಈಶ್ವರ್‌ʼ ಚಿತ್ರದಿಂದ ಮೊದಲುಗೊಂಡು ʼಸಾಹೋʼ ತನಕ ಪ್ರಭಾಸ್‌‌ ನಟಿಸಿದ ಒಟ್ಟು 19 ಚಿತ್ರಗಳು ರಿಲೀಸ್‌ ಆಗಿವೆ. 

1517

ಈ ಪೈಕಿ ʼಬಾಹುಬಲಿ-ದಿ ಬಿಗಿನಿಂಗ್‌ʼ ಹಾಗೂ ʼಬಾಹುಬಲಿ-ಕನ್‌ಕ್ಲೂಶನ್‌ʼ ಭಾರತ ಮಾತ್ರವಲ್ಲದೆ ಜಾಗತಿಕವಾಗಿಯೂ ಸದ್ದು ಮಾಡಿದ್ದವು. ಇದೀಗ ಅವರು ನಟಿಸುತ್ತಿರುವ ʼಸಲಾರ್‌ʼ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರೀ ಕ್ರೇಜ್‌ ಸೃಷ್ಟಿ ಮಾಡಿದೆ.

1617

ದಕ್ಷಿಣ ಭಾರತದ ಎಲ್ಲ ಚಿತ್ರರಂಗಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ನಾಯಕರು ಹೇಳಿದರು .

1717

ಸಿನಿಮಾ ಸಂಭ್ರಮ

ಸಿನಿಮಾ ಸಂಭ್ರಮ

click me!

Recommended Stories