ಆದಿಪುರುಷ್ ರಾಮಾಯಣ ಮಹಾಕಾವ್ಯದ ಆಧುನಿಕ ರೂಪಾಂತರವಾಗಿದೆ. ಚಿತ್ರದಲ್ಲಿ ಪ್ರಭಾಸ್ ರಾಮನಾಗಿ ಕಾಣಿಸಿಕೊಂಡಿದ್ದಾರೆ. ಕೃತಿ ಸನೊನ್ ಸೀತೆಯ ಪಾತ್ರದಲ್ಲಿ ಮಿಂಚಿದ್ದಾರೆ. ದೊಡ್ಡ ಬಜೆಟ್ ನಲ್ಲಿ ಈ ಸಿನಿಮಾ ಮೂಡಿ ಬಂದಿದ್ದು ಇದೇ ತಿಂಗಳು ಜೂನ್ 16ರಂದು ರಿಲೀಸ್‌ಗೆ ಸಿದ್ಧವಾಗಿದೆ. ಪ್ರಭಾಸ್ ಅವರನ್ನು ಮತ್ತೆ ದೊಡ್ಡ ಪರದೆ ಮೇಲೆ ನೋಡಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ.