ರಣವೀರ್ ಸಿಂಗ್-ದೀಪಿಕಾ ರೊಮ್ಯಾಂಟಿಕ್ ರ್ಯಾಂಪ್ ವಾಕ್; ಫೋಟೋ ವೈರಲ್

Published : Jul 30, 2022, 02:24 PM IST

ನಟ ರಣವೀರ್ ಸಿಂಗ್ ಮತ್ತು ದೀಪಿಕಾ ದಂಪತಿ ಖ್ಯಾತ ಸೆಲೆಬ್ರಿಟಿ ಡಿಸೈನರ್ ಮನೀಶ್ ಮಲ್ಹೋತ್ರಾ ಅವರ ಮಿಜ್ವಾನ್ ಫ್ಯಾಷನ್ ಶೋನಲ್ಲಿ ಭಾಗಿಯಾಗಿದ್ದರು. ಈಶೋ ನಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು. 2022ನೇ ಮಿಜ್ವಾನ್ ಫ್ಯಾಷನ್ ಶೋ ಇದಾಗಿದ್ದು ಈ ಬಾರಿ ದೀಪಿಕಾ ಮತ್ತು ರಣವೀರ್ ಸಿಂಗ್ ಮಿಂಚಿದ್ದಾರೆ. 

PREV
17
ರಣವೀರ್ ಸಿಂಗ್-ದೀಪಿಕಾ ರೊಮ್ಯಾಂಟಿಕ್ ರ್ಯಾಂಪ್ ವಾಕ್; ಫೋಟೋ ವೈರಲ್

ಬಾಲಿವುಡ್ ಕ್ಯೂಟ್ ಕಪಲ್ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿ ಸದಾ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ. ಸದಾ ಕೈ ಕೈ ಹಿಡಿದು ಓಡಾಡುವ ಈ ಜೋಡಿ ಇತ್ತೀಚಿಗಷ್ಟೆ ಬಾಲಿವುಡ್‌ನ ಖ್ಯಾತ ಡಿಸೈನರ್ ಆಯೋಜನೆ ಮಾಡಿದ್ದ ಫ್ಯಾಷನ್ ಶೋನಲ್ಲಿ ಭಾಗಿಯಾಗಿದ್ದರು. 

27

ನಟ ರಣವೀರ್ ಸಿಂಗ್ ಮತ್ತು ದೀಪಿಕಾ ದಂಪತಿ ಖ್ಯಾತ ಸೆಲೆಬ್ರಿಟಿ ಡಿಸೈನರ್ ಮನೀಶ್ ಮಲ್ಹೋತ್ರಾ ಅವರ ಮಿಜ್ವಾನ್ ಫ್ಯಾಷನ್ ಶೋನಲ್ಲಿ ಭಾಗಿಯಾಗಿದ್ದರು. ಈಶೋ ನಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು. 2022ನೇ ಮಿಜ್ವಾನ್ ಫ್ಯಾಷನ್ ಶೋ ಇದಾಗಿದ್ದು ಈ ಬಾರಿ ದೀಪಿಕಾ ಮತ್ತು ರಣವೀರ್ ಸಿಂಗ್ ಮಿಂಚಿದ್ದಾರೆ. 

37

ಮನೀಶ್ ಮಲ್ಹೋತ್ರಾ ಅವರ ಮಿಜ್ವಾನ್ ಫ್ಯಾಷನ್ ಶೋಗೆ 10 ವರ್ಷದ ಸಂಭ್ರಮ. ಹಾಗಾಗಿ ಈ ಬಾರಿ ಅದ್ದೂರಿಯಾಗಿ ಆಯೋಜನೆ ಮಾಡಿದ್ದರು. ಈ ಶೋನಲ್ಲಿ ಅನೇಕ ಬಾಲಿವುಡ್ ಗಣ್ಯರು ಭಾಗಿಯಾಗಿ ರ್ಯಾಂಪ್ ವಾಕ್ ಮಾಡಿದ್ದರು.

47

 ಆದರೆ ದೀಪಿಕಾ ಮತ್ತು ರಣವೀರ್ ಸಿಂಗ್ ಜೋಡಿ ಎಲ್ಲರ ಗಮನ ಸೆಳೆದರು. ರಾಯಲ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದ ದೀಪ್‌ವೀರ್ ಜೋಡಿ ಅಭಿಮಾನಿಗಳ ಹೃದಯ ಗೆದ್ದರು. ಇಬ್ಬರ ರೊಮ್ಯಾಂಟಿಕ್ ರ್ಯಾಂಪ್ ವಾಕ್‌ನ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  
 

57

ರಾಯಲ್ ಲುಕ್ ನಲ್ಲಿ ಇಬ್ಬರು ಕಾಣಿಸಿಕೊಂಡಿದ್ದಾರೆ. ರಣವೀರ್ ಸಿಂಗ್ ಗ್ರ್ಯಾಂಡ್ ಶೇರ್ವಾನಿಯಲ್ಲಿ ಮಿಂಚಿದ್ರೆ ನಟಿ ದೀಪಿಕಾ ಲೆಹಂಗಾದಲ್ಲಿ ಕಾಣಿಸಿಕೊಂಡಿದ್ದಾರೆ. ರಣವೀರ್ ಸಿಂಗ್ ಪತ್ನಿ ದೀಪಿಕಾಗೆ ಕಿಸ್ ಮಾಡಿ ಪ್ರೀತಿ ವ್ಯಕ್ತಪಡಿಸಿದರು. 

67

ರಣವೀರ್ ಸಿಂಗ್ ಇತ್ತೀಚಿಗಷ್ಟೆ ಬೆತ್ತಲಾಗಿ ಫೋಟೋಶೂಟ್ ಮಾಡಿಸಿದ್ದರು. ರಣವೀರ್ ಸಿಂಗ್ ಬೆತ್ತಲೆ ಫೋಟೊಶೂಟ್ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ನಗ್ನ ಫೋಟೊಶೂಟ್ ವೈರಲ್ ಆದ ಬೆನ್ನಲ್ಲೇ ಪರ ವಿರೋಧ ಚರ್ಚೆ ಪ್ರಾರಂಭವಾಗಿದೆ. ಅನೇಕರು ರಣವೀರ್ ಬೆತ್ತಲೇ ಫೋಟೋಶೂಟ್ ಅನ್ನು ವಿರೋಧ ಮಾಡಿದ್ದರು. ಆದರೆ ಬಾಲಿವುಡ್ ನ ಅನೇಕ ಸ್ಟಾರ್ ಕಲಾವಿದರು ರಣವೀರ್ ಪರ ನಿಂತಿದ್ದಾರೆ.

77

ಬೆತ್ತಲಾದ ಬೆನ್ನಲ್ಲೇ ರಣವೀರ್ ಸಿಂಗ್ ಫ್ಯಾಷನ್ ಶೋನಲ್ಲಿ ಮಿಂಚಿದ್ದಾರೆ. ರಣವೀರ್ ಸಿಂಗ್ ಮತ್ತು ದೀಪಿಕಾ ಸಿನಿಮಾ ಶೂಟಿಂಗ್ ಜೊತೆಗೆ ಫ್ಯಾಷನ್ ಶೋ, ಪ್ರವಾಸ ಅಂತ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ರಣವೀರ್ ಸಿಂಗ್ ಸದ್ಯ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದೀಪಿಕಾ ಸದ್ಯ ಬಾಲಿವುಡ್ ಜೊತೆಗೆ ತೆಲುಗು ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.  
  

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories