ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರ ಜೊತೆ ರಶ್ಮಿಕಾ ಪಾರ್ಟಿ: ಫೋಟೋ ವೈರಲ್

Published : Jan 28, 2023, 12:23 PM IST

ನಟಿ ರಶ್ಮಿಕಾ ಮಂದಣ್ಣ ಸದ್ಯ ಮಿಷನ್ ಮಜ್ನು ಸಿನಿಮಾದ ಸಕ್ಸಸ್‌ನ ಖುಷಿಯಲ್ಲಿದ್ದಾರೆ. ಇದೇ ಖುಷಿಯಲ್ಲಿ ಸಿನಿಮಾತಂಡ ಸಕ್ಸಸ್ ಪಾರ್ಟಿ ಮಾಡಿ ಸಂಭ್ರಮಿಸಿದೆ. 

PREV
17
ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರ ಜೊತೆ ರಶ್ಮಿಕಾ ಪಾರ್ಟಿ: ಫೋಟೋ ವೈರಲ್

ನಟಿ ರಶ್ಮಿಕಾ ಮಂದಣ್ಣ ಸದ್ಯ ಮಿಷನ್ ಮಜ್ನು ಸಿನಿಮಾದ ಸಕ್ಸಸ್ನ ಖುಷಿಯಲ್ಲಿದ್ದಾರೆ. ಇದು ರಶ್ಮಿಕಾ ನಟನೆಯ ಎರಡನೇ ಬಾಲಿವುಡ್ ಸಿನಿಮಾವಾಗಿದೆ. ಮೊದಲ ಸಿನಿಮಾ ಗುಡ್ ಬೈ ಬಾಕ್ಸ್ ಆಫೀಸ್ ನಲ್ಲಿ ಸೋಲು ಕಂಡಿತ್ತು. ಇದೀಗ ಮಿಷನ್ ಮಜ್ನು ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬಂದಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

27

ಮಿಷನ್ ಮಜ್ನು ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿದೆ. ನೆಟ್ ಫ್ಲಿಕ್ಸ್ ನಲ್ಲಿ ರಿಲೀಸ್ ಆಗಿದೆ. ಸಿದ್ದಾರ್ಥ್ ಮತ್ತು ರಶ್ಮಿಕಾ ಕೆಮಿಸ್ಟ್ರಿ ಎಲ್ಲರಿಗೂ ಇಷ್ಟವಾಗಿದೆ. ರಶ್ಮಿಕಾ ಈ ಸಿನಿಮಾದಲ್ಲಿ ಕಣ್ಣು ಕಾಣದ ಅಂಧಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾಕಿಸ್ತಾನದ ಯುವತಿ ಪಾತ್ರದಲ್ಲಿ ರಶ್ಮಿಕಾ ಮಿಂಚಿದ್ದಾರೆ. 

37

ಮಿಷನ್ ಮಜ್ನು ಸಕ್ಸಸ್ ಪಾರ್ಟಿಯಲ್ಲಿ ರಶ್ಮಿಕಾ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ರಶ್ಮಿಕಾ ಸಿದ್ಧಾರ್ಥ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕ್ಯಾಮರಾ ಮುಂದೆ ಕಾಣಿಸಿಕೊಂಡ ರಶ್ಮಿಕಾ ಮತ್ತು ಸಿದ್ಧಾರ್ಥ್ ಸಖತ್ ಪೋಸ್ ನೀಡಿದ್ದಾರೆ. 

47

ರಶ್ಮಿಕಾ ನಗುತ್ತಾ ತನ್ನ ಸಿಗ್ನೇಚರ್ ಸಿಂಬಲ್ ತೋರಿಸುತ್ತಾ ಪೋಸ್ ನೀಡಿದ್ದಾರೆ. ಇಬ್ಬರ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ. ರಶ್ಮಿಕಾ ಮತ್ತು ಸಿದ್ಧಾರ್ಥ್ ಜೊತೆ ಇಡೀ ಸಿನಿಮಾತಂಡ ಹಾಜರಿತ್ತು. ಎಲ್ಲರೂ ಕ್ಯಾಮರಾಗೆ ಪೋಸ್ ನೀಡಿದ್ದು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. 

57

ರಶ್ಮಿಕಾ ಸದ್ಯ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮಿಷನ್ ಮಜ್ನು ಜೊತೆಗೆ ಸಕ್ಸಸ್ ಬಳಿಕ ರಶ್ಮಿಕಾ ಅನಿಮಲ್ ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ರಣಬೀರ್ ಕಪೂರ್ ಜೊತೆ ಕಾಣಿಸಿಕೊಂಡಿದ್ದಾರೆ. ರಣಬೀರ್ ವಿಭಿನ್ನವಾದ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು ಈಗಾಗಲೇ ವೈರಲ್ ಆಗಿದೆ. 
 

67

ರಶ್ಮಿಕಾ ನಟನೆಯ ಎರಡು ಸಿನಿಮಾ ಜನವರಿಯಲ್ಲಿ ರಿಲೀಸ್ ಆಗಿದೆ. ತಮಿಳಿನ ವಾರಿಸು ಸಿನಿಮಾ ಕೂಡ ಉತ್ತಮ ಕಮಾಯಿ ಮಾಡಿದೆ. ದಳಪತಿ ವಿಜಯ್ ಜೊತೆ ರಶ್ಮಿಕಾ ಕಾಣಿಸಿಕೊಂಡಿದ್ದರು. ಮೊದಲ ಬಾರಿಗೆ ವಿಜಯ್ ಜೊತೆ ನಟಿಸಿದ್ದರು. ಈ ಸಿನಿಮಾದಲ್ಲಿ ತನ್ನ ಪಾತ್ರಕ್ಕೆ ಯಾವುದೇ ಮಹತ್ವವಿಲ್ಲ ಎಂದು ರಶ್ಮಿಕಾ ಹೇಳಿದ್ದರು. ವಿಜಯ್ ಗಾಗಿ ಸಿನಿಮಾ ಒಪ್ಪಿಕೊಂಡಿರುವುದಾಗಿಯೂ ಬಹಿರಂಗ ಪಡಿಸಿದ್ದರು. 

77

ಸದ್ಯ ತೆಲುಗಿನ ಪುಷ್ಪ 2 ಸಿನಿಮಾಗಾಗಿ ರಶ್ಮಿಕಾ ಕಾಯುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು ರಶ್ಮಿಕಾ ಅಲ್ಲು ಅರ್ಜುನ್ ಜೊತೆ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಮೊದಲ ಭಾಗದ ಸೂಪರ್ ಸಕ್ಸಸ್ ಬಳಿಕ 2ನೇ ಭಾಗದ ಚಿತ್ರೀಕರಣ ಮಾಡುತ್ತಿದ್ದಾರೆ. ರಶ್ಮಿಕಾ ಮತ್ತೊಮ್ಮೆ ಶ್ರೀವಲ್ಲಿಯಾಗಿ ಅಭಿಮಾನಿಗಳನ್ನು ರಂಜಿಸಲು ಸಜ್ಜಾಗುತ್ತಿದ್ದಾರೆ.   

Read more Photos on
click me!

Recommended Stories