ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾದಲ್ಲಿ ಎಷ್ಟೇ ಬ್ಯುಸಿಯಾಗಿದ್ದರೂ ಸೋಶಿಯಲ್ ಮೀಡಿಯಾದಲ್ಲಿಯೂ ಸದಾ ಆಕ್ಟಿವ್ ಆಗಿರುತ್ತಾರೆ. ಈ ಮೂಲಕ ಅಭಿಮಾನಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುತ್ತಾರೆ.
ಸೋಮವಾರ ಕೊಡಗಿನ ಶೈಲಿಯಲ್ಲಿ ಸೀರೆ ಧರಿಸಿ, ತಮ್ಮೂರಿನ ಬಗ್ಗೆ ಬರೆದುಕೊಂಡಿದ್ದಾರೆ. ಕೊಡಗು ಹಾಗೂ ಇಲ್ಲಿಯ ಸಂಸ್ಕೃತಿ ಸದಾ ನನ್ನ ಜೊತೆಯಲ್ಲಿರುತ್ತೆ ಎಂದು ಬರೆದುಕೊಳ್ಳುವ ತಮ್ಮೂರನ್ನು ಪರಿಚಯ ಮಾಡಿಸಿದ್ದಾರೆ.
ಕೊಡಗು ನನ್ನ ಹೃದಯದಲ್ಲಿ ಇರುವ ಸ್ಥಳ. ಇವತ್ತು ನನ್ನ ಹುಡುಗಿಯರ ಜೊತೆ ಇದ್ದೇನೆ. ಆದರೆ ವಧು ಯಾತ್ರಾ ಮದುವೆ ಕಾರ್ಯದಲ್ಲಿ ಬ್ಯುಸಿ ಇರುವುದರಿಂದ ನಿಮ್ಮ ಜೊತೆ ಫೋಟೋ ತೆಗೆಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ತಮ್ಮೂರಿನ ಅಭಿಮಾನಿಗಳಿಗೆ ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ ಸದ್ಯ ನಾಲ್ಕೈದು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇಡೀ ದೇಶವೇ ಪುಷ್ಪಾ-2 ಸಿನಿಮಾದಲ್ಲಿಯ ಶ್ರೀವಲ್ಲಿಯನ್ನು ನೋಡಲು ಕಾಣುತ್ತಿದ್ದಾರೆ. ದಿ ಗರ್ಲ್ ಫ್ರೆಂಡ್, ರೇನ್ ಬೋ, ಸಲ್ಮಾನ್ ಖಾನ್ ಜೊತೆಯಲ್ಲಿಯೂ ರಶ್ಮಿಕಾ ನಟಿಸುತ್ತಿದ್ದಾರೆ. ಇವುಗಳ ಜೊತೆಯಲ್ಲಿ ಹೊಸ ಕಥೆಯನ್ನು ಕೇಳುತ್ತಿದ್ದಾರೆ.
ಸಲ್ಮಾನ್ ಖಾನ್ ಜೊತೆಗಿನ ಸಿನಿಮಾಗಾಗಿ ರಶ್ಮಿಕಾ ಮಂದಣ್ಣ ಬರೋಬ್ಬರಿ 13 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ ರಶ್ಮಿಕಾ ಮಂದಣ್ಣ ಆಸೆಯೇ ಬೇರೆ ಇದೆ. ಆ ಆಸೆ ಈಡೇರುವ ಕಾಲ ಸಮೀಪಿಸುತ್ತಿದೆ.
ರಶ್ಮಿಕಾ ಮಂದಣ್ಣಗೆ ಜೂನಿಯರ್ ಎನ್‌ಟಿಆರ್ ಜೊತೆ ನಟಿಸಬೇಕೆಂಬ ಆಸೆ ಇದೆ ಎಂದು ಹೇಳಿಕೊಂಡಿದ್ದರು. ಎನ್‌ಟಿಆರ್‌ಗೆ ಜೋಡಿಯಾಗಿ ನಟಿಸುವ ಕಾಲ ಸಮೀಪ ಬಂದಿದೆ. ಹಾಗಾಗಿ ರಶ್ಮಿಕಾಳ ಬಹುದಿನಗಳ ಕನಸು ನನಸಾಗುತ್ತಿದೆ. ಈ ಚಿತ್ರದಲ್ಲಿ ನಟಿಸಲು ರಶ್ಮಿಕಾ ಏಳು ಕೋಟಿ ಸಂಭಾವನೆ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ.
ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ಎನ್‌ಟಿಆರ್‌ಗೆ ಜೋಡಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ತಾರಕ್ ಸಿನಿಮಾ ಮಾಡಲಿದ್ದಾರೆ. ಸಿನಿಮಾದ ಚಿತ್ರೀಕರಣ ಆಗಸ್ಟ್‌ನಲ್ಲಿ ಪ್ರಾರಂಭವಾಗಲಿದೆ. ನಾಯಕಿಯಾಗಿ ರಶ್ಮಿಕಾ ಮಂದಣ್ಣ ಆಯ್ಕೆಯಾಗಿದ್ದಾರೆ.