ಪುಷ್ಪ 2 ಚಿತ್ರಮಂದಿರಗಳಲ್ಲಿ ಯಶಸ್ಸಿನ ನಾಗಾಲೋಟ ಮುಂದುವರೆಸುತ್ತಿರುವ ಹಿನ್ನೆಲೆಯಲ್ಲಿ, ಪುಷ್ಪ 2 ಓಟಿಟಿ ಬಿಡುಗಡೆ ಬಗ್ಗೆ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪುಷ್ಪ 2 ಸಂಕ್ರಾಂತಿ ಹಬ್ಬಕ್ಕೆ ಓಟಿಟಿಯಲ್ಲಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಚಿತ್ರತಂಡ ಸ್ಪಷ್ಟನೆ ನೀಡಿದೆ.
ಪುಷ್ಪ 2 ಓಟಿಟಿ ಬಿಡುಗಡೆ ಬಗ್ಗೆ ಬರುತ್ತಿರುವ ಸುದ್ದಿಗಳು ಸುಳ್ಳು ಎಂದು ಖಚಿತಪಡಿಸಿದೆ. ಯಾವುದೇ ಕಾರಣಕ್ಕೂ 56 ದಿನಗಳ ಒಳಗೆ ಓಟಿಟಿ ಬಿಡುಗಡೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಕ್ರಿಸ್‌ಮಸ್ ಮತ್ತು ಸಂಕ್ರಾಂತಿ ಹಬ್ಬಗಳಲ್ಲಿ ಪುಷ್ಪ 2 ಚಿತ್ರವನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಬೇಕು ಎಂದು ಚಿತ್ರತಂಡ ತಿಳಿಸಿದೆ.
ಈ ಸೀಸನ್‌ನಲ್ಲಿ ದೊಡ್ಡ ಸ್ಪರ್ಧೆ ನೀಡುವ ಯಾವ ಚಿತ್ರಗಳೂ ಬಿಡುಗಡೆಯಾಗದ ಕಾರಣ, ಪುಷ್ಪ 2 ಗಳಿಕೆ ಮತ್ತಷ್ಟು ಹೆಚ್ಚಾಗುವುದು ಖಚಿತ.