ಗೋಲ್ಡನ್ ಗರ್ಲ್ ಆಗಿ ಮಿಂಚಿದ ನಟಿ ರಶ್ಮಿಕಾ ಮಂದಣ್ಣ; ಫ್ಯಾನ್ಸ್ ಹೇಳಿದ್ದೇನು?

First Published Apr 28, 2023, 12:38 PM IST

ಗೋಲ್ಡನ್ ಗರ್ಲ್ ಆಗಿ ಮಿಂಚಿದ ನಟಿ ರಶ್ಮಿಕಾ ಮಂದಣ್ಣ ಅವರನ್ನು ನೋಡಿ ಅಭಿಮಾನಿಗಳು ಹಾಡಿಹೊಗಳುತ್ತಿದ್ದಾರೆ. 

ಬಹುಭಾಷೆಯಲ್ಲಿ ಮಿಂಚಿತ್ತಿರುವ ನಟಿ ರಶ್ಮಿಕಾ ಮಂದಣ್ಣ ಆಗಾಗ ಹೊಸ ಫೋಟೋಶೂಟ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ರಶ್ಮಿಕಾ ಮತ್ತೆ ಹೊಸ ಫೋಟೋ ಮೂಲಕ ಅಮಾನಿಗಳ ಮುಂದೆ ಬಂದಿದ್ದಾರೆ. 

ಸಿನಿಮಾ ಕೆಲಸಗಳ ನಡುವೆಯೂ ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಆಗಾಗ ಹೊಸ ಹೊಸ ಪೋಸ್ಟ್‌ಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ರಶ್ಮಿಕಾ ಶೇರ್ ಮಾಡಿರುವ ಫೋಟೋ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ. 

Latest Videos


ರಶ್ಮಿಕಾ ಫೋಟೋಗೆ ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ರಶ್ಮಿಕಾ ಫೋಟೋ ಶೇರ್ ಮಾಡುತ್ತಿದ್ದಂತೆ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದು ಬಂದಿದೆ. 

ರಶ್ಮಿಕಾ ಫೋಟೋಗೆ ಅಭಿಮಾನಿಗಳು ಸೆಕ್ಸಿ, ಹಾಟ್ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಗೋಲ್ಡನ್ ಗರ್ಲ್ ಎಂದು ಅನೇಕರು ಹೇಳುತ್ತಿದ್ದಾರೆ. ಸದ್ಯ ಶೇರ್ ಮಾಡಿರುವ ಫೋಟೋದಲ್ಲಿ ರಶ್ಮಿಕಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. 

ರಶ್ಮಿಕಾ ಸದ್ಯ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್‌ನಲ್ಲಿ ಈಗಾಗಲೇ ಎರಡು ಸಿನಿಮಾಗಳ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಆದರೆ ಎರಡು ಸಿನಿಮಾಗಳು ಹೇಳಿಕೊಳ್ಳುವಷ್ಟು ಸಕ್ಸಸ್ ಸಿಕ್ಕಿಲ್ಲ. ಇದೀಗ ಮತ್ತೊಂದು ಹಿಂದಿ ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. 
 

ರಶ್ಮಿಕಾ ಸದ್ಯ ತೆಲುಗಿನಲ್ಲಿ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಭಾಗ ಸೂಪರ್ ಸಕ್ಸಸ್ ಕಂಡ ಬಳಿಕ ಪಾರ್ಟ್-2 ಮೇಲೆ ನಿರೀಕ್ಷೆ ಹೆಚ್ಚಾಗಿದೆ. ರಶ್ಮಿಕಾ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಪುಷ್ಪ-2 ಜೊತೆಗೆ ಇನ್ನೂ ಎರಡು ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. 

click me!