ಜಿಮ್ ವರ್ಕೌಟ್ ವೇಳೆ ನಟಿ ರಶ್ಮಿಕಾ ಮಂದಣ್ಣಗೆ ಗಾಯ, ಶೂಟಿಂಗ್ ಸ್ಥಗಿತಗೊಳಿಸಿ ವಿಶ್ರಾಂತಿ

First Published | Jan 10, 2025, 7:06 PM IST

ನ್ಯಾಷನಲ್ ಕ್ರಶ್, ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಪುಷ್ಪ 2 ಸಿನಿಮಾದ ಮೂಲಕ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿದ್ದಾರೆ. ಇದೀಗ ಸಲ್ಮಾನ್ ಖಾನ್ ಜೊತೆ ಸಿಕಂದರ್ ಶೂಟಿಂಗ್‌ನಲ್ಲಿ ಬ್ಯೂಸಿಯಾಗಿದ್ದಾರೆ. ಆದರೆ ನಟಿ ರಶ್ಮಿಕಾ ಮಂದಣ್ಣ ಜಿಮ್ ವರ್ಕೌಟ್ ವೇಳೆ ಗಾಯಗೊಂಡಿದ್ದಾರೆ. 

ರಶ್ಮಿಕಾ ಮಂದಣ್ಣಗೆ ಗಾಯ

ಭಾರತದ ನಂ.1 ನಟಿಯಾಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಸತತ ಬ್ಲಾಕ್ ಬಸ್ಟರ್ ಸಿನಿಮಾ ನೀಡುತ್ತಿದ್ದಾರೆ. ಬಾಲಿವುಡ್‌ನಲ್ಲಿ ಆ್ಯನಿಮಲ್ ಹಿಟ್ ಚಿತ್ರದ ಬಳಿಕ ಪುಷ್ಪಾ 2 ಎಲ್ಲಾ ದಾಖಲೆ ಪುಡಿ ಮಾಡಿದ್ದಾರೆ. ಇದೀಗ ಬಾಲಿವುಡ್‌ನಲ್ಲಿ ಸಲ್ಮಾನ್ ಖಾನ್ ಜೊತೆಗೆ ಸಿಕಂದರ್ ಶೂಟಿಂಗ್‌ನಲ್ಲಿ ಬ್ಯೂಸಿಯಾಗಿದ್ದಾರೆ. ಆದರೆ ನಟಿ ರಶ್ಮಿಕಾ ಮಂದಣ್ಣ ಜಿಮ್ ವರ್ಕೌಟ ಮಾಡುವಾಗ ಗಾಯಗೊಂಡಿದ್ದಾರೆ. ಹೀಗಾಗಿ ಸಿಂದರ್ ಶೂಟಿಂಗ್‌ನಿಂದ ಹೊರಗುಳಿದಿದ್ದಾರೆ. 

ಜಿಮ್‌ನಲ್ಲಿ ಆಕಸ್ಮಿಕವಾಗಿ ಗಾಯಗೊಂಡಿರುವ ರಶ್ಮಿಕಾ ಸಿನಿಮಾ ಶೂಟಿಂಗ್‌‌ನಿಂದ ಅನಿವಾರ್ಯವಾಗಿ ಬ್ರೇಕ್ ಪಡೆದಿದ್ದಾರೆ. ಸಂಪೂರ್ಣವಾಗಿ ಚೇತರಿಸಿಕೊಂಡ ನಂತರವೇ ಶೂಟಿಂಗ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ರಶ್ಮಿಕಾ ಗಾಯ ಅವರ ಅಭಿಮಾನಿಗಳಿಗೆ ಆತಂಕ ತಂದಿದೆ. ರಶ್ಮಿಕಾ ಮಂದಣ್ಣ ಗಾಯದ ಪ್ರಮಾಣವೇನು? ಸುರಕ್ಷಿತವಾಗಿದ್ದಾರಾ ಅನ್ನೋ ಆತಂಕವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ. 

Tap to resize

ಗಾಯದ ಕುರಿತು ಮಾಹಿತಿ ಬಹಿರಂಗಪಡಿಸಿಲ್ಲ. ಕೆಲ ದಿನಗಳ ವಿಶ್ರಾಂತಿ ಬಳಿಕ ರಶ್ಮಿಕಾ ಮಂದಣ್ಣ ಮತ್ತೆ ಸಿಕಂದರ್ ಶೂಟಿಂಗ್‌ನಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಪುಷ್ಪಾ 2 ಸಿನಿಮಾದಲ್ಲಿ ಅದ್ಭುತ ಅಭಿನಯದ ಮೂಲಕ ರಶ್ಮಿಕಾ ಮಂದಣ್ಣ ಮತ್ತೆ ಅಭಿಮಾನಿಗಳ ಹೃದಯ ಗೆದ್ದಿದ್ದರು. ಇದೀಗ ಆ್ಯನಿಮಲ್ ಚಿತ್ರದ ಬಳಿಕ ಬಾಲಿವುಡ್‌ನಲ್ಲಿ ಮಿಂಚಲು ರಶ್ಮಿಕಾ ಮಂದಣ್ಣ ಸಜ್ಜಾಗಿದ್ದಾರೆ. ಇದರ ನಡುವೆ ಗಾಯಗೊಂಡು ವಿಶ್ರಾಂತಿಗೆ ಜಾರಿದ್ದಾರೆ.

ಭರ್ಜರಿ ಯಶಸ್ಸಿನೊಂದಿಗೆ ಮುನ್ನುಗ್ಗುತ್ತಿರುವ ರಶ್ಮಿಕಾ, ಅನಿಮಲ್ ಮತ್ತು ಪುಷ್ಪ 2 ಸಿನಿಮಾಗಳಿಂದ 3096 ಕೋಟಿ ಗಳಿಕೆ ಕಂಡಿದ್ದಾರೆ. ಈ ಗಾಯದಿಂದ ಶೂಟಿಂಗ್‌ಗೆ ಬ್ರೇಕ್ ಬಿದ್ದಿದ್ದರೂ, ಶೀಘ್ರದಲ್ಲೇ ಅವರು ಮರಳಲಿದ್ದಾರೆ ಎಂದು ಅಭಿಮಾನಿಗಳು ಆಶಿಸಿದ್ದಾರೆ.

ಪುಷ್ಪ 2: ದಿ ರೂಲ್‌ನಲ್ಲಿ ಶ್ರೀವಲ್ಲಿ ಪಾತ್ರಕ್ಕೆ ರಶ್ಮಿಕಾ ಮೆಚ್ಚುಗೆ ಗಳಿಸಿದ್ದಾರೆ. ಈ ಚಿತ್ರ ಬಾಹುಬಲಿ 2 ದಾಟಿ ಗಳಿಕೆ ಕಂಡಿದೆ. ದಂಗಲ್ ನಂತರ ಭಾರತದಲ್ಲಿ ಎರಡನೇ ಅತಿ ಹೆಚ್ಚು ಗಳಿಕೆ ಕಂಡ ಚಿತ್ರ ಇದಾಗಿದೆ.

ಸಲ್ಮಾನ್ ಖಾನ್ ಜೊತೆ ರಶ್ಮಿಕಾ ನಟಿಸುತ್ತಿರುವ ಸಿಕಂದರ್ ಚಿತ್ರ ಈದ್ 2025 ರಂದು ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವೂ ಬ್ಲಾಕ್ ಬಸ್ಟರ್ ಆಗಲಿದೆ ಎಂದು ಅಭಿಮಾನಿಗಳು ಭರವಸೆ ವ್ಯಕ್ತಪಡಿಸಿದ್ದಾರೆ. ಇದೀಗ ರಶ್ಮಿಕಾ ಬೇಗನೆ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಆರಂಭಿಸಿದ್ದಾರೆ. 

Latest Videos

click me!