‘ಕಾಂತಾರ ಚಾಪ್ಟರ್ 1’ ಕರ್ನಾಟಕದಲ್ಲಿ ದೀಪಾವಳಿ ಹಬ್ಬಕ್ಕೆ ಭರ್ಜರಿ ಗಳಿಕೆ ಮಾಡಿದೆ. ಸುಮಾರು 200 ಕೋಟಿ ರು. ಗೂ ಅಧಿಕ ಕಲೆಕ್ಷನ್ ಮಾಡುವ ಮಾಡುವ ಮೂಲಕ ರಿಷಬ್ ಶೆಟ್ಟಿ ಸಿನಿಮಾ ಹೊಸ ದಾಖಲೆ ನಿರ್ಮಿಸಿದೆ.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಕರ್ನಾಟಕದಲ್ಲಿ ದೀಪಾವಳಿ ಹಬ್ಬಕ್ಕೆ ಭರ್ಜರಿ ಗಳಿಕೆ ಮಾಡಿದೆ. ಸುಮಾರು 200 ಕೋಟಿ ರು. ಗೂ ಅಧಿಕ ಕಲೆಕ್ಷನ್ ಮಾಡುವ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.
25
ಕೆಜಿಎಫ್ 2 ರೆಕಾರ್ಡ್ ಬ್ರೇಕ್
ಈ ಗಳಿಕೆ ಮಾಡಿದ ಏಕೈಕ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಹಿಂದೆ ‘ಕೆಜಿಎಫ್ 2’ ಸಿನಿಮಾ ಕನ್ನಡದಲ್ಲಿ ಅತ್ಯಧಿಕ ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆ ಮಾಡಿತ್ತು.
35
ವಿಶ್ವಾದ್ಯಂತ ಉತ್ತಮ ಪ್ರದರ್ಶನ
ಕರ್ನಾಟಕದಲ್ಲಿ ಸುಮಾರು 183 ಕೋಟಿ ರು.ಗಳಷ್ಟು ಕಲೆಕ್ಷನ್ ಮಾಡಿದ್ದ ಆ ಚಿತ್ರದ ದಾಖಲೆಯನ್ನು ‘ಕಾಂತಾರ 1’ ಮುರಿದಿದೆ. ಈ ಚಿತ್ರದ ಆಸ್ಟ್ರೇಲಿಯಾ, ಉತ್ತರ ಅಮೆರಿಕಾಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ವಿಶ್ವಾದ್ಯಂತ ಈ ಚಿತ್ರ 800 ಕೋಟಿ ರು.ಗೂ ಅಧಿಕ ಗಳಿಕೆ ದಾಖಲಿಸಿದೆ.
ಕಾಂತಾರ ಸಿನಿಮಾ ಈಗಾಗಲೇ 18 ದಿನಗಳಲ್ಲಿ 765 ಕೋಟಿ ಕಬಳಿಸಿದೆ. ಇದೀಗ ದೀಪಾವಳಿ ಹಬ್ಬದ ರಜಾದಿನಗಳ ವಿಶೇಷವಾಗಿ ಕಾಂತಾರ ಸಿನಿಮಾ 800 ಕೋಟಿ ರೂ. ಗಡಿ ದಾಟಲಿದೆ. ಅಂದಹಾಗೆ ಕಾಂತಾರ ಸಿನಿಮಾದ ಗಳಿಕೆ ಮೂರನೇ ವಾರದಲ್ಲೂ ಕುಗ್ಗಿಲ್ಲ.
55
ದೀಪಾವಳಿ ಹಬ್ಬಕ್ಕೆ ಮತ್ತೊಂದು ದಾಖಲೆ
ಇನ್ನು ಕಾಂತಾರ ಚಾಪ್ಟರ್-1 ಸಿನಿಮಾಗೆ ಪ್ರಪಂಚದಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾ ದೀಪಾವಳಿ ಹಬ್ಬಕ್ಕೆ ಮತ್ತೊಂದು ಹೊಸ ದಾಖಲೆ ಸೃಷ್ಟಿಸುತ್ತಿದೆ.