‘ಕಾಂತಾರ ಚಾಪ್ಟರ್ 1’ ಆನ್‌ಲೈನ್‌ನಲ್ಲಿ 50 ಲಕ್ಷಕ್ಕೂ ಅಧಿಕ ಟಿಕೆಟ್ ಮಾರಾಟ ಕಂಡಿದೆ ಎಂದು ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ತಿಳಿಸಿದೆ. ಸಿನಿಮಾ ಬಿಡುಗಡೆಯಾದಾಗಿನಿಂದ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದೆ.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಆನ್‌ಲೈನ್‌ನಲ್ಲಿ 50 ಲಕ್ಷಕ್ಕೂ ಅಧಿಕ ಟಿಕೆಟ್ ಮಾರಾಟ ಕಂಡಿದೆ ಎಂದು ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ತಿಳಿಸಿದೆ.
25
200 ಕೋಟಿ ಕ್ಲಬ್
ವೀಕೆಂಡ್‌ನಲ್ಲಿ ಸಿನಿಮಾ 200 ಕೋಟಿ ಕ್ಲಬ್ ಸೇರಿದ್ದು, ವಿಶ್ವಾದ್ಯಂತ ಅಂದಾಜು 230 ಕೋಟಿ ರು. ಗಳಿಕೆ ಮಾಡಿದೆ. ಭಾರತದಲ್ಲಿ ವಿವಿಧ ಭಾಷೆಗಳ ಒಟ್ಟು ಗಳಿಕೆ 200 ಕೋಟಿ ರು. ದಾಟಿದೆ ಎನ್ನಲಾಗಿದೆ.
35
ರಾಷ್ಟ್ರಪತಿ ಭವನದಲ್ಲಿ ಮೂರು ಪ್ರದರ್ಶನ
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕನ್ನಡದ ಜನಪ್ರಿಯ ಚಿತ್ರ ಕಾಂತಾರ ಚಾಪ್ಟರ್-1 ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಭಾನುವಾರ ರಾಷ್ಟ್ರಪತಿ ಭವನದಲ್ಲಿ 3 ಶೋಗಳನ್ನು ಪ್ರದರ್ಶಿಸಲಾಯಿತು.
ರಾಷ್ಟ್ರಪತಿ ಭವನದ ಸಿಬ್ಬಂದಿ ಚಿತ್ರವನ್ನು ವೀಕ್ಷಿಸಿದರು. ಅ.2ರಂದು ಸಿನಿಮಾ ಬಿಡುಗಡೆಯಾದಾಗಿನಿಂದ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದೆ. ಬಿಡುಗಡೆಯಾದ 3 ದಿನದಲ್ಲೇ ₹170 ಕೋಟಿಗೂ ಹೆಚ್ಚು ಗಳಿಕೆ ಮಾಡಿದೆ.
55
ಪ್ರೇಕ್ಷಕರಿಂದಲೂ ಭರ್ಜರಿ ರೆಸ್ಪಾನ್ಸ್
ಈ ಸಿನಿಮಾವನ್ನು ಹೊಂಬಾಳೆ ಫಿಲಂಸ್ ಅಡಿ ವಿಜಯ್ ಕಿರಗಂದೂರು ಮತ್ತು ಚಲುವೆ ಗೌಡ ನಿರ್ಮಾಣ ಮಾಡಿದ್ದಾರೆ. ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನು ಸಿನಿಮಾಗೆ ಪ್ರೇಕ್ಷಕರಿಂದಲೂ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗಿದೆ.