ರಾ.. ರಾ.. ರಕ್ಕಮ್ಮ.. ಹಾಡಿಗೆ ಸಲ್ಮಾನ್ ಸಖತ್ ಸ್ಟೆಪ್; ವಿಕ್ರಾಂತ್ ರೋಣ ಈವೆಂಟ್‌ನಲ್ಲಿ ಬಾಲಿವುಡ್ ಸ್ಟಾರ್

First Published | Jul 26, 2022, 11:30 AM IST

ವಿಕ್ರಾಂತ್ ರೋಣ ತಂಡದ ಜೊತೆ ಸಲ್ಮಾನ್ ಖಾನ್ ಬ್ಲಾಕ್ ಬಸ್ಟರ್ ಹಿಟ್ ಹಾಡಿಗೆ ಭರ್ಜರಿ ಹೆಜ್ಜೆ ಹಾಕಿದ್ದಾರೆ. ಹೌದು, ಈಗಾಗಲೇ ಸಖತ್ ವೈರಲ್ ಆಗಿರುವ ರಾ..ರಾ..ರಕ್ಕಮ್ಮ ಹಾಡಿಗೆ ಸಲ್ಮಾನ್ ಖಾನ್ ಸಹ ಹೆಜ್ಜೆ ಹಾಕಿದ್ದಾರೆ. 

ಅಭಿನಯಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್‌ನ ಬ್ಯುಸಿಯಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ವಿಕ್ರಾಂತ್ ರೋಣ ಸಿನಿಮಾದ ಪ್ರಮೋಷನ್ ಕೆಲಸ ಭರ್ಜರಿಯಾಗಿ ನಡೆಯುತ್ತಿದೆ. ಅಭಿನಯ ಚಕ್ರವರ್ತಿ ಸದ್ಯ ಮುಂಬೈನಲ್ಲಿದ್ದು ವಿಕ್ರಾಂತ್ ರೋಣ ಪ್ರಮೋಷನ್ ನಲ್ಲಿ ತೊಡಗಿದ್ದಾರೆ. 

ಇತ್ತೀಚಿಗಷ್ಟೆ ಮುಂಬೈನಲ್ಲಿ ವಿಕ್ರಾಂತ್ ರೋಣ ಸಿನಿಮಾದ ಪ್ರೀಮಿಯರ್ ಆಗಿದ್ದು ಬಾಲಿವುಡ್‌ನ ಅನೇಕ ಗಣ್ಯರು ಹಾಜರಾಗಿದ್ದರು. ವಿಶೇಷ ಅಂದರೆ ಕಿಚ್ಚನ ಸಿನಿಮಾ ಈವೆಂಟ್ ನಲ್ಲಿ ಸಲ್ಮಾನ್ ಖಾನ್ ಮತ್ತು ರಿತೀಶ್ ದೇಶಮುಖ್ ಹಾಗೂ ಜೆನಿಲಿಯ ದಂಪತಿ ಹಾಜರಾಗಿದ್ದರು. 
 

Tap to resize

ವಿಕ್ರಾಂತ್ ರೋಣ ತಂಡದ ಜೊತೆ ಸಲ್ಮಾನ್ ಖಾನ್ ಬ್ಲಾಕ್ ಬಸ್ಟರ್ ಹಿಟ್ ಹಾಡಿಗೆ ಭರ್ಜರಿ ಹೆಜ್ಜೆ ಹಾಕಿದ್ದಾರೆ. ಹೌದು, ಈಗಾಗಲೇ ಸಖತ್ ವೈರಲ್ ಆಗಿರುವ ರಾ..ರಾ..ರಕ್ಕಮ್ಮ ಹಾಡಿಗೆ ಸಲ್ಮಾನ್ ಖಾನ್ ಸಹ ಹೆಜ್ಜೆ ಹಾಕಿದ್ದಾರೆ. ಕಿಚ್ಚ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ವೇದಿಕೆಯಲ್ಲಿ ರಾ..ರಾ...ರಕ್ಕಮ್ಮ ಹಾಡಿಗೆ ಡಾನ್ಸ್ ಮಾಡುತ್ತಿರುವಾಗ ಸರ್ಪ್ರೈಸ್ ಎಂಟ್ರಿ ಕೊಟ್ಟ ಸಲ್ಮಾನ್ ಖಾನ್, ಕಿಚ್ಚ ಸುದೀಪ್ ಮತ್ತು ಜಾಕ್ವೆಲಿನ್ ಜೊತೆ ತಾವು ಡಾನ್ಸ್ ಮಾಡಿದ್ದಾರೆ. 

ವಿಕ್ರಾಂತ್ ರೋಣ ಮುಂಬೈ  ಸಿನಿಮಾ ಈವೆಂಟ್ ನ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ವಿಕ್ರಾಂತ್ ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಕಿಚ್ಚನ ಸ್ನೇಹಿತರಾದ ರಿತೇಶ್ ದೇಶಮುಖ್ ಮತ್ತು ಜೆನಿಲಿಯಾ ಕೂಡ ಹಾಜರಿದ್ದರು. 

ಬಹುನಿರೀಕ್ಷೆಯ ವಿಕ್ರಾಂತ್ ರೋಣ ಜುಲ್ 28ರಂದು ರಿಲೀಸ್ ಆಗುತ್ತಿದೆ. ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿಯಲ್ಲಿ ರಿಲೀಸ್ ಆಗುತ್ತಿದೆ. ಇನ್ನು ಇಂಗ್ಲಿಷ್ ನಲ್ಲೂ ಸಿನಿಮಾ ಡಬ್ ಆಗಿದೆ. ವಿಕ್ರಾಂತ್ ರೋಣ ಚಿತ್ರಕ್ಕೆ ಅನೂಫ್ ಭಂಡಾರಿ ಆಕ್ಷನ್ ಕಟ್ ಹೇಳಿದ್ದಾರೆ. 

ಈ ಸಿನಿಮಾದಲ್ಲಿ ಸುದೀಪ್ ಜೊತೆ ನಿರೂಪ್ ಭಂಡಾರಿ, ನೀತಾ ಅಶೋಕ್, ವಾಸುಕಿ ವೈಭವ್ ಸೇರಿದಂತೆ ಇನ್ನು ಅನೇಕರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಟ್ರೈಲರ್, ಹಾಡುಗಳ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ವಿಕ್ರಾಂತ್ ರೋಣನನ್ನು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.      

ಈಗಾಗಲೇ ಸುದೀಪ್ ಮತ್ತು ತಂಡ ದಕ್ಷಿಣ ಭಾರತದಲ್ಲಿ ಭರ್ಜರಿ ಪ್ರಚಾರ ಮಾಡಿದ್ದಾರೆ. ಕೇರಳ, ತೆಲುಗು  ಮತ್ತು ತಮಿಳಿನಲ್ಲಿ ಪ್ರಚಾರ ಕಾರ್ಯ ನಡೆಸಿರುವ ಕಿಚ್ಚ ಸದ್ಯ ಮುಂಬೈನಲ್ಲಿದ್ದಾರೆ. ಇನ್ನು ಇಂದು (ಜುಲೈ 26) ಸಂಜೆ ಬೆಂಗಳೂರಿನಲ್ಲಿ ಅದ್ದೂರಿ ಪ್ರಿ ರಿಲೀಸ್ ಈವೆಂಟ್ ನಡೆಯುತ್ತಿದೆ.    

ವಿಕ್ರಾಂತ್ ರೋಣ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ದೇಶದಾದ್ಯಂತ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ವಿಕ್ರಾಂತ್ ರೋಣ ರಿಲೀಸ್ ಆಗುತ್ತಿದೆ. ದೇಶ ಮತ್ತು ವಿದೇಶಗಳಲ್ಲಿ ವಿಕ್ರಾಂತ್ ರೋಣ ಅಬ್ಬರಿಸಲಿದೆ.     

ಹಿಂದಿಯಲ್ಲಿ ವಿಕ್ರಾಂತ್ ರೋಣ ಸಿನಿಮಾವನ್ನು ಸಲ್ಮಾನ್ ಖಾನ್ ಪ್ರೆಸೆಂಟ್ ಮಾಡುತ್ತಿದ್ದಾರೆ. ಸುದೀಪ್ ಮತ್ತು ಸಲ್ಮಾನ್ ಖಾನ್ ನಡುವೆ ಉತ್ತಮ ಬಾಂಧವ್ಯವಿದೆ. ಸಲ್ಮಾನ್ ಖಾನ್ ದಬಂಗ್ ಸಿನಿಮಾದಲ್ಲಿ ನಟಿಸಿದ್ದರು. ವಿಲನ್ ಆಗಿ ಸುದೀಪ್ ಅಬ್ಬರಿಸಿದ್ದರು. ಈ ಸಿನಿಮಾ ಬಳಿಕ ಇಬ್ಬರ ನಡುವೆ ಉತ್ತಮ ಬಾಂಧವ್ಯ ವಿದೆ. ಇದೀಗ ವಿಕ್ರಾಂತ್ ರೋಣ ಸಿನಿಮಾಗೆ ಸಲ್ಮಾನ್ ಖಾನ್ ಸಾಥ್ ನೀಡಿದ್ದಾರೆ.  

Latest Videos

click me!