ಪೋರ್ಕಿ ಚಿತ್ರದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಕಾಲಿಟ್ಟ ನಟಿ ಪ್ರಣಿತಾ ಸುಭಾಷ್ ನಂತರ ಸಾಲು ಸಾಲು ಸಿನಿಮಾಗಳಲ್ಲಿ ಮಿಂಚಿದರು. ಸ್ಟಾರ್‌ಗಳ ಜೊತೆ ತೆರೆಹಂಚಿಕೊಂಡರು. ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಮತ್ತು ಬಾಲಿವುಡ್‌ನಲ್ಲಿಯೂ ನಟಿಸಿ ಸೈ ಎನಿಸಿಕೊಂಡ್ರು. ಚಿತ್ರರಂಗದಲ್ಲಿ ಡಿಮ್ಯಾಂಡ್ ಇರುವಾಗಲೇ ಕಳೆದ ವರ್ಷ ಲಾಕ್‌ಡೌನ್‌ನಲ್ಲಿ ಉದ್ಯಮಿ ನಿತಿನ್ ರಾಜ್ ಜೊತೆ ಹಸೆಮಣೆ ಏರಿದ್ದರು.