ಜಿ20 ಶೃಂಗಸಭೆಯು ಭಾರತದಲ್ಲಿ ಮೆಗಾ-ಯಶಸ್ವಿ ಕಾರ್ಯಕ್ರಮ ಎನಿಸಿಕೊಂಡಿದ್ದು, ಈ ಹಿನ್ನೆಲೆ ಶಾರುಖ್ ಖಾನ್ ಪ್ರಧಾನಿ ಮೋದಿಯನ್ನು ಅಭಿನಂದಿಸಿದರು. ಎಕ್ಸ್ ಅಂದರೆ ಈ ಹಿಂದಿನ ಟ್ವಿಟ್ಟರ್‌ನಲ್ಲಿ "ಭಾರತದ ಜಿ 20 ಅಧ್ಯಕ್ಷ ಸ್ಥಾನದ ಯಶಸ್ಸಿಗಾಗಿ ಮತ್ತು ವಿಶ್ವದ ಜನರಿಗೆ ಉತ್ತಮ ಭವಿಷ್ಯಕ್ಕಾಗಿ ರಾಷ್ಟ್ರಗಳ ನಡುವೆ ಏಕತೆಯನ್ನು ಬೆಳೆಸುವುದಕ್ಕಾಗಿ ಗೌರವಾನ್ವಿತ ಪ್ರಧಾನಿ ಮೋದಿ ಜೀ ಅವರಿಗೆ ಅಭಿನಂದನೆಗಳು. ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ಗೌರವ ಮತ್ತು ಹೆಮ್ಮೆಯ ಭಾವನೆ. ಸರ್, ನಿಮ್ಮ ನಾಯಕತ್ವದಲ್ಲಿ, ನಾವು ಪ್ರತ್ಯೇಕವಾಗಿರದೆ ಏಕತೆಯಲ್ಲಿ ಏಳಿಗೆ ಹೊಂದುತ್ತೇವೆ. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ" ಎಂದು ಕಿಂಗ್ ಖಾನ್ ಶಾರುಖ್ ಖಾನ್ ಟ್ವೀಟ್ ಮೂಲಕ ಮೋದಿಯನ್ನು ಹಾಡಿ ಹೊಗಳಿದ್ದಾರೆ.