ಸಕಲಕಲಾ ವಲ್ಲಭ ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿರುವ ಶ್ರುತಿ ಹಾಸನ್ ಸದ್ಯ ಬಾಯ್ ಫ್ರೆಂಡ್ ಜೊತೆಗಿನ ಫೋಟೋ ಶೇರ್ ಮಾಡಿ ಸುದ್ದಿಯಾಗಿದ್ದಾರೆ.
ಇತ್ತೀಚಿಗಷ್ಟೆ ಶ್ರುತಿ ಹಾಸನ್ ದಪ್ಪಗಾಗಿದ್ದ ಮುಖದ ಫೋಟೋ ಹಂಚಿಕೊಂಡು ಅಚ್ಚರಿ ಮೂಡಿಸಿದ್ದರು. ಇದೀಗ ಬಾಯ್ ಫ್ರೆಂಡ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿದ್ದಾರೆ. ಅಂದಹಾಗೆ ಶ್ರುತಿ ತನ್ನ ಬೋಲ್ಡ್‌ನೆಸ್ ಮೂಲವೇ ಅಭಿಮಾನಿಗಳಿಗೆ ಹೆಚ್ಚು ಇಷ್ಟವಾಗುತ್ತಾರೆ.
ಶ್ರುತಿ ಹಾಸನ್ ಸದ್ಯ ಸಂತಾನು ಹಜಾರಿಕಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ. ಆಗಾಗ ಸಂತಾನು ಜೊತೆ ಇರುವ ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ. ಇದೀಗ ಬಾಯ್ ಫ್ರೆಂಡ್ ಜೊತೆ ಇರುವ ಮತ್ತೊಂದು ಫೋಟೋ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ಸ್ಟೇಟಸ್ ನಲ್ಲಿ ಶ್ರುತಿ ಬಾಯ್ ಫ್ರೆಂಡ್ ಜೊತೆಗಿರುವ ಫೋಟೋ ಹಂಚಿಕೊಂಡಿದ್ದಾರೆ.
ಗೆಳತಿ ಶ್ರುತಿ ಹಾಸನ್ ಅವರನ್ನು ತಬ್ಬಿಕೊಂಡಿರುವ ಸಂತಾನು ಹಜಾರಿಕ ಫೋಟೋವನ್ನು ಶೇರ್ ಮಾಡಿದ್ದಾರೆ. ಹಿಂದಿಯಿಂದ ಸಂತಾನು ತಬ್ಬಿಕೊಂಡಿದ್ದು ಶ್ರುತಿ ಹಾಸನ್ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಫೋಟೋ ಶೇರ್ ಮಾಡಿ ನನಗೆ ಬೇಕಾಗಿರುವುದು ಎಂದು ಹೇಳಿದ್ದಾರೆ.
ಶ್ರುತಿ ಹಾಸನ್ ಇತ್ತೀಚಿನ ದಿನಗಳಲ್ಲಿ ಸಿನಿಮಾ ವಿಚಾರಕ್ಕಿಂತ ಹೆಚ್ಚಾಗಿ ಬಾಯ್ ಫ್ರೆಂಡ್ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಪ್ರೀತಿ ವಿಚಾರವನ್ನು ಬಚ್ಚಿಡದ ಶ್ರುತಿ ಬಾಯ್ ಫ್ರೆಂಡ್ ಸಂತಾನು ಹಜಾರಿಕ ಜೊತೆ ಆಗಾಗ ಮುಂಬೈನಲ್ಲಿ ಕಾಣಿಸಿಕೊಳ್ಳುತ್ತಾರೆ.
ಶ್ರುತಿ ಹಾಸನ್ ಸದ್ಯ ಸಲಾರ್ ಸಿನಿಮಾ ಜೊತೆಗೆ ಇನ್ನು ಮೂರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರಭಾಸ್ ಜೊತೆ ಸಲಾರ್ ನಲ್ಲಿ ಮಿಂಚುತ್ತಿದ್ದಾರೆ. ಈ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇನ್ನು ವೀರ ಸಿಂಹ ರೆಡ್ಡಿ, ವಾಲ್ಟೇರ್ ವೀರಯ್ಯ, ದಿ ಐ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.