ನಟಿ ರಶ್ಮಿಕಾ ಮಂದಣ್ಣ ಕನ್ನಡದಲ್ಲಿ ಸಕ್ಸಸ್ ಕಾಣುತ್ತಿದ್ದಂತೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಟಾಲಿವುಡ್‌ನಲ್ಲಿ ವಿಜಯ್ ದೇವರಕೊಂಡ ಜೊತೆ ಕಾಣಿಸಿಕೊಂಡಿದ್ದ ರಶ್ಮಿಕಾ ದೊಡ್ಡ ಮಟ್ಟದ ಸಕ್ಸಸ್ ಕಂಡರು. ಗೀತಾ ಗೋವಿಂದಂ ಸಿನಿಮಾದಲ್ಲಿ ಮೊದಲು ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡರು. ಆ ಸಿನಿಮಾ ಹಿಟ್ ಆಗುವ ಜೊತೆ ಗೆ ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಜೋಡಿ ಬ್ಲಾಕ್ ಬಸ್ಟರ್ ಹಿಟ್ ಆಯಿತು.
ರಶ್ಮಿಕಾ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್ ತೆದುಕೊಟ್ಟ ಸಿನಿಮಾ ಗೀತಾ ಗೋವಿಂದಂ. ಬಳಿಕ ರಶ್ಮಿಕಾ ಬೇಡಿಕೆ ಹೆಚ್ಚಾಯಿತು. ತೆಲುಗಿನ ದೊಡ್ಡ ದೊಡ್ಡ ಸ್ಟಾರ್‌ಗಳ ಜೊತೆ ನಟಿಸಿದರು. ತೆಲುಗು ಬಳಿಕ ತಮಿಳು ಮತ್ತು ಬಾಲಿವುಡ್‌ಗೂ ಹಾರಿದರು. ಅಷ್ಟೇಯಲ್ಲ ರಶ್ಮಿಕಾ ಮತ್ತು ದೇವರಕೊಂಡ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೂಡ ಇದೆ. ಈ ನಡುವೆ ವಿಜಯ್ ದೇವರಕೊಂಡ ಕನ್ನಡದ ಮತ್ತೋರ್ವ ನಟಿ ಜೊತೆ ರೊಮ್ಯಾನ್ಸ್ ಮಾಡುತ್ತಿದ್ದಾರೆ.
ವಿಜಯ್ ದೇವರಕೊಂಡ ಮತ್ತು ಕನ್ನಡದ ನಟಿ ಶ್ರೀಲೀಲಾ ಇಬ್ಬರೂ ಹೊಸ ಸಿನಿಮಾಗೆ ಜೋಡಿಯಾಗಿದ್ದಾರೆ. ಇಂದು (ಮೇ 3) ಉದ್ದೂರಿ ಮುಹೂರ್ತ ಮೂಲಕ ಸಿನಿಮಾಗೆ ಚಾಲನೆ ನೀಡಲಾಗಿದೆ.
ವಿಜಯ್ ದೋವರಕೊಂಡ ಮತ್ತ ಶ್ರೀಲೀಲಾ ಮೊದಲ ಬಾರಿಗೆ ಒಟ್ಟಿಗೆ ನಟಿಸುತ್ತಿದ್ದಾರೆ. ಅಂದಹಾಗೆ ಇಬ್ಬರ ಸಿನಿಮಾಗೆ ಜೆರ್ಸಿ ಸಿನಿಮಾ ಖ್ಯಾತಿಯ ಗೌತಮ್ ತಿನ್ನನೂರಿ ನಿರ್ದೇಶನ ಮಾಡುತ್ತಿದ್ದಾರೆ.
ನಟಿ ಶ್ರೀಲೀಲಾ ಮತ್ತು ವಿಜಯ್ ದೇವರಕೊಂಡ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಶ್ರೀಲೀಲಾ ಫೋಟೋ ಹಂಚಿಕೊಂಡು ವಿಜಯ್ ದೇವರಕೊಂಡ ಜೊತೆ ನಟಿಸಲು ಕಾಯುತ್ತಿದ್ದೀನಿ ಎಂದು ಹೇಳಿದ್ದಾರೆ.
ಶ್ರೀಲೀಲಾ ಮತ್ತು ವಿಜಯ್ ದೇವರಕೊಂಡ ಸಿನಿಮಾಗೆ ಇನ್ನೂ ಹೆಸರು ಇಟ್ಟಿಲ್ಲ. ಸದ್ಯದಲ್ಲೇ ಈ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಪಡಿಸುವ ಸಾದ್ಯತೆ ಇದೆ.
ಶ್ರೀಲೀಲಾ ಸದ್ಯ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪವನ್ ಕಲ್ಯಾಣ್, ಮಹೇಶ್ ಬಾಬು, ರಾಮ್ ಪೊತಿನೇನಿ ಜೊತೆ ನಟಿಸುತ್ತಿದ್ದಾರೆ. ವಿಜಯ್ ದೇವರಕೊಂಡ ಟೈಸನ್ ಸಿನಿಮಾದ ಸೋಲಿನ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡಿರಲಿಲ್ಲ. ಇದೀಗ ಹೊಸ ಸಿನಿಮಾ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.