ಪ್ರಪಂಚದಾದ್ಯಂತ ಖ್ಯಾತಿ ಪಡೆದಿರುವ ಪ್ಯಾನ್ ಇಂಡಿಯಾ ನಿರ್ದೇಶಕ ಎಸ್.ಎಸ್. ರಾಜಮೌಳಿ ಬಗ್ಗೆ ಯಾರಿಗೂ ಪರಿಚಯ ಬೇಕಿಲ್ಲ. ಬಾಹುಬಲಿ, ಆರ್‌ಆರ್‌ಆರ್ ಸಿನಿಮಾಗಳ ಮೂಲಕ ಭಾರತೀಯ ಸಿನಿಮಾವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಜಕ್ಕಣ್ಣ, ಈಗ ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ಒಂದು ಬೃಹತ್ ಆಕ್ಷನ್ ಅಡ್ವೆಂಚರ್ ಸಿನಿಮಾ ಮಾಡ್ತಿದ್ದಾರೆ.