ಕೂಲಿ ಚಿತ್ರ ತಮಿಳು ಸಿನಿಮಾದಲ್ಲಿ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದು. ವಿಕ್ರಮ್, ಲಿಯೋ, ಮಾಸ್ಟರ್ ಬ್ಲಾಕ್ ಬಸ್ಟರ್ ಚಿತ್ರಗಳ ನಿರ್ದೇಶಕ ಲೋಕೇಶ್ ಕನಕರಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸೂಪರ್‌ಸ್ಟಾರ್ ರಜನಿಕಾಂತ್ ನಾಯಕರಾಗಿ ನಟಿಸಿದ್ದಾರೆ. ಬಾಲಿವುಡ್ ಸೂಪರ್‌ಸ್ಟಾರ್ ಅಮೀರ್ ಖಾನ್, ತೆಲುಗು ನಟ ನಾಗಾರ್ಜುನ, ಕನ್ನಡ ನಟ ಉಪೇಂದ್ರ, ಮಲಯಾಳಂ ನಟ ಸೌಬಿನ್ ಷಾಹಿರ್, ಸತ್ಯರಾಜ್, ಶ್ರುತಿ ಹಾಸನ್ ಮುಂತಾದವರು ನಟಿಸಿರುವ ಮಲ್ಟಿಸ್ಟಾರ್ಸ್ ಚಿತ್ರ ಇದಾಗಿದೆ. ಸನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ಕಲಾನಿಧಿ ಮಾರನ್ ನಿರ್ಮಿಸಿದ್ದಾರೆ.