ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಸೂಪರ್‌ಸ್ಟಾರ್ ರಜನಿಕಾಂತ್‌ಗೆ ಆಹ್ವಾನ!

First Published | Jan 2, 2024, 7:11 PM IST

ಜನವರಿ 22ರಂದು ಭವ್ಯ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದೆ. ಈಗಾಗಲೇ ಗಣ್ಯರನ್ನು ಪ್ರಾಣಪ್ರತಿಷ್ಠೆಗೆ ಆಹ್ವಾನ ನೀಡಲಾಗುತ್ತಿದೆ. ಈ ಪೈಕಿ ಸೂಪರ್‌ಸ್ಟಾರ್ ರಜನಿಕಾಂತ್‌ಗೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ ನೀಡಲಾಗಿದೆ.

ಭವ್ಯ ಶ್ರೀರಾಮ ಮಂದಿರ ನಿರ್ಮಾಣಗೊಂಡಿದೆ. ಅಂತಿಮ ಹಂತದ ಕಾಮಗಾರಿಗಳು ಭರದಿಂದ ಸಾಗಿದೆ. ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈಗಾಗಲೇ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ.

ರಾಮ ಮಂದಿರ ಉದ್ಘಾಟನೆ ಹಾಗೂ ಪ್ರಾಣಪ್ರತಿಷ್ಠೆಗೆ ಇದೀಗ ಸೂಪರ್‌ಸ್ಟಾರ್ ರಜನಿಕಾಂತ್‌ಗೆ ಆಹ್ವಾನ ನೀಡಲಾಗಿದೆ. ಈ ಕುರಿತು ಬಿಜೆಪಿ ನಾಯಕ ರಾ ಅರ್ಜುನಮೂರ್ತಿ ಸಂತಸ ಹಂಚಿಕೊಂಡಿದ್ದಾರೆ.

Tap to resize

ರಾಮ ಮಂದಿರದ ಆಹ್ವಾನ ಸ್ವೀಕರಿಸಿದ ರಜನಿಕಾಂತ್ ಬಿಜೆಪಿ ಹಾಗೂ ಇತರ ಆರ್‌ಎಸ್‌ಎಸ್ ನಾಯಕರ ಜೊತೆ ಫೋಟೋಗೆ ಪೋಸ್ ನೀಡಿದ್ದಾರೆ. ಈ ಕುರಿತು ರಾ ಅರ್ಜುನಮೂರ್ತಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
 

ರಜನಿಕಾಂತ್ ಮನೆಗೆ ತೆರಳಿ ರಾಮ ಮಂದಿರ ಪ್ರಾಣಪ್ರತಿಷ್ಠೆ ಆಹ್ವಾನ ನೀಡಲಾಗಿದೆ. ಇತ್ತ ರಜನಿಕಾಂತ್ ಕೂಡ ಪ್ರಾಣ್ರತಿಷ್ಠೆಯಲ್ಲಿ ಪಾಲ್ಗೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ನನ್ನ ಜೀವನ ಅತ್ಯಂತ ಸಂತಸದ ಕ್ಷಣಗಳು. ರಜನಿಕಾಂತ್ ಮನೆಗೆ ತೆರಳಿ ಸೂಪರ್ ಸ್ಟಾರ್ ಹಾಗೂ ಅವರ ಕುಟುಂಬವನ್ನು ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ ನೀಡಿದ್ದೇನೆ. ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪರವಾಗಿ ಆಹ್ವಾನ ನೀಡಲಾಗಿದೆ ಎಂದು ರಾ ಅರ್ಜುನಮೂರ್ತಿ ಹೇಳಿದ್ದಾರೆ.

ರಾಮ ಮಂದಿರ ಆಹ್ವಾನ ಕೆಲ ವಿವಾದಕ್ಕೂ ಕಾರಣವಾಗಿದೆ. ಬಿಜಪಿಯು ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಶಿವಸೇನೆ ನಾಯಕ ಉದ್ಧವ್‌ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಿಜೆಪಿಯು ಶ್ರೀರಾಮನನ್ನು ಚುನಾವಣೆಯಲ್ಲಿ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸುವುದೊಂದು ಉಳಿದಿದೆ ಎಂದು ಉದ್ದವ್ ಠಾಕ್ರೆ ಶಿವಸೇನೆ ಬಣದ ಸಂಜಯ್ ರಾವುತ್ ಆರೋಸಿದ್ದರು.

ಮಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಶ್ರೀರಾಮನ ಮೂರ್ತಿಯನ್ನು ಆಯೋಧ್ಯೆಯ ಭವ್ಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ಐತಿಹಾಸಿಕ ಕ್ಷಣಕ್ಕೆ ವಿಶ್ವವೇ ಕಾತರವಾಗಿದೆ.
 

Latest Videos

click me!