ಈ ಹಿನ್ನೆಲೆಯಲ್ಲಿ, ಸಿನಿಮಾ ನಿರ್ದೇಶಕರು, ನಿರ್ಮಾಪಕರು, ಕೊರಿಯೋಗ್ರಾಫರ್‌ಗಳು ಮತ್ತು ಸಂಬಂಧಿತ ವಲಯಗಳು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಮಹಿಳಾ ಆಯೋಗವು ಎಚ್ಚರಿಸುತ್ತಿದೆ. ಮಹಿಳೆಯರನ್ನು ಕೀಳಾಗಿ ತೋರಿಸುವ, ಅಸಭ್ಯ ಡ್ಯಾನ್ಸ್ ಸ್ಟೆಪ್ಸ್‌ಗಳನ್ನು ತಕ್ಷಣವೇ ನಿಲ್ಲಿಸಬೇಕು. ಈ ಎಚ್ಚರಿಕೆಯನ್ನು ಪಾಲಿಸದಿದ್ದರೆ, ಸಂಬಂಧಿತ ಕಾನೂನುಗಳ ಪ್ರಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧರಿದ್ದೇವೆ