ಶಕ್ತಿ ಕಪೂರ್ ಅವರ ಮಗಳು ಶ್ರದ್ಧಾ ಕಪೂರ್ (Shraddha kapoor) ತನ್ನ ನಟನೆ ಮತ್ತು ಸೌಂದರ್ಯದ ಆಧಾರದ ಮೇಲೆ ಅವರು ಬಾಲಿವುಡ್‌ನಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದ್ದಾರೆ. ಬಾಲಿವುಡ್ ನಟಿಯರು ತಮ್ಮ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡರೆ, ಶ್ರದ್ಧಾ ತಮ್ಮ ನೈಸರ್ಗಿಕ ಸೌಂದರ್ಯವನ್ನು ನಂಬುತ್ತಾರೆ. ಪ್ಲಾಸ್ಟಿಕ್ ಸರ್ಜರಿ ನೈಸರ್ಗಿಕ ಸೌಂದರ್ಯವನ್ನು ನಾಶಪಡಿಸುತ್ತದೆ ಎಂದು ಅವರು ಒಮ್ಮೆ ಕಾರ್ಯಕ್ರಮವೊಂದರಲ್ಲಿ ಹೇಳಿದರು.