ಮಿನಿ ಸ್ವಿಟ್ಜರ್ಲೆಂಡ್ ಎಂದು ಕರೆಯಲ್ಪಡುವ ಕಾಶ್ಮೀರದ ಪ್ರಮುಖ ಪ್ರವಾಸಿ ತಾಣ ಪಹಲ್ಗಾಮ್. ಇತ್ತೀಚೆಗೆ ಭಯೋತ್ಪಾದಕರು ದಾಳಿ ನಡೆಸಿದ ಸ್ಥಳ ಇದಾಗಿದೆ. ಈ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಈ ಘಟನೆ ಇಡೀ ಭಾರತವನ್ನೇ ಬೆಚ್ಚಿಬೀಳಿಸಿದೆ. ಈ ದಾಳಿಯಿಂದಾಗಿ ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಅಲ್ಲದೆ, ಪ್ರವಾಸಕ್ಕೆಂದು ಹೋಗಿದ್ದ ಪ್ರವಾಸಿಗರು ತಮ್ಮ ಪ್ರಯಾಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. ಇದರಿಂದಾಗಿ ರೈಲು ನಿಲ್ದಾಣಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ಜನಸಂದಣಿ ಹೆಚ್ಚಾಗಿದೆ.