ವಿಚಿತ್ರ ಉಡುಗೆ ಮೂಲಕ ಸದ್ದು ಮಾಡುತ್ತಿದ್ದ ನಟಿ ಉರ್ಫಿ ಜಾವೆದ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅರೆಬರೆ ಬಟ್ಟೆ ಧರಿಸಿ ಕ್ಯಾಮರಾ ಮುಂದೆ ಹಾಜರಾಗುತ್ತಿದ್ದ ಉರ್ಫಿ ಇದೀಗ ಹುಷಾರು ತಪ್ಪಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಬಿಗ್ ಬಾಸ್ ಒಟಿಟಿ ಖ್ಯಾತಿಯ ಉರ್ಫಿ ಅವರಿಗೆ ಕಳೆದ ಎರಡು ಮೂರು ದಿನಗಳಿಂದ ಸಿಕ್ಕಾಪಟ್ಟೆ ವಾಂತಿ ಮತ್ತು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.