ಚಂದನವನದ ಗೊಂಬೆ ಲೀಲಾವತಿ, ಮಂಗಳೂರು ಮೂಲದ ಬೆಡಗಿ; ಚಿತ್ರರಂಗಕ್ಕೆ ಬಂದ ಕಥೆಯೇ ರೋಚಕ

First Published | Dec 8, 2023, 6:31 PM IST

ಚಂದನವನದ ಗೊಂಬೆ ಲೀಲಾವತಿ ಮಂಗಳೂರು ಮೂಲದ ಬೆಡಗಿ. ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವರು.  ಚಿತ್ರರಂಗಕ್ಕೆ ಬಂದ ಕಥೆಯೇ ರೋಚಕ. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದಾರೆ.

ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಕನ್ನಡದ ಹಿರಿಯ ನಟಿ ಲೀಲಾವತಿ ಕೊನೆಯುಸಿರೆಳೆದಿದ್ದಾರೆ. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ.

ಲೀಲಾವತಿ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರು. ಕನ್ನಡದಲ್ಲಿ ಅಷ್ಟೇ ಅಲ್ಲ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆ ಸೇರಿದಂತೆ ಒಟ್ಟು 600 ಚಿತ್ರಗಳಲ್ಲಿ ನಟಿಸಿದ್ದಾರೆ.

Tap to resize

ಕನ್ನಡದಲ್ಲಿ ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ಲೀಲಾವತಿ ನಟಿಸಿರುವ ಲೀಲಾವತಿ ತಮ್ಮ ಮನೋಜ್ಞ ಅಭಿನಯದಿಂದ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ.

ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು.

ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು. ಕೆಲಚಿತ್ರಗಳಲ್ಲಿ ನಾಯಕ ನಟರಿಗಿಂತ ಹೆಚ್ಚಿನ ಸಂಭಾವನೆ ಪಡೆಯುವ ನಾಯಕಿಯಾಗಿ ಗುರುತಿಸಿಕೊಂಡಿದ್ದರು.

ಸುಬ್ಬಯ್ಯ ನಾಯ್ಡು ಅವರ ಭಕ್ತ ಪ್ರಹ್ಲಾದದಲ್ಲಿ ಕೂಡಾ ಅಭಿನಯಿಸಿದರು. ಹಲವಾರು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ಅಭಿನಯಿಸಿದರು. ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ಮಾಂಗಲ್ಯ ಯೋಗ. ಡಾ. ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ. ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು.

ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ದ ಸಾಲಿನಲ್ಲಿ ಲೀಲಾವತಿಗೆ ನೀಡಲಾಗಿದೆ. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ನೀಡಲಾಗಿತ್ತು.

Latest Videos

click me!