ಈ ನಡುವೆ ಯಶ್ ಲಂಡನ್‌ಗೆ ಪ್ರಯಾಣ ಬೆಳೆಸಿದ್ದಾರೆ. ಸಿನಿಮಾವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸುವ ನಿಟ್ಟಿನಲ್ಲಿ ಗ್ಲೋಬಲ್ ಪಾರ್ಟನರ್‌ಶಿಪ್ ಬಗ್ಗೆ ಇಲ್ಲಿ ಪ್ರಮುಖ ಕಂಪನಿಗಳ ಜೊತೆ ಮಾತುಕತೆ ನಡೆಯಲಿದೆ ಎನ್ನಲಾಗಿದೆ.
56
ಮಾರ್ಚ್ 19, 2026ಕ್ಕೆ ಬಿಡುಗಡೆ
ಈಗಾಗಲೇ ಟಾಕ್ಸಿಕ್ ಸಿನಿಮಾ ಅಮೆರಿಕದಲ್ಲಿ ಹಾಲಿವುಡ್ ಜೊತೆ ವ್ಯವಹಾರದ ಸಹಯೋಗ ಮಾಡಿಕೊಂಡಿದ್ದು ಇಂಗ್ಲೀಷ್‌ನಲ್ಲೂ ತಯಾರಾಗುತ್ತಿದೆ. ಈ ಸಿನಿಮಾ ಮಾರ್ಚ್ 19, 2026ಕ್ಕೆ ಬಿಡುಗಡೆ ಆಗುತ್ತಿದೆ.
66
ಗೀತು ಮೋಹನ್ದಾಸ್ ನಿರ್ದೇಶನ
‘ಟಾಕ್ಸಿಕ್’ ಸಿನಿಮಾಗೆ ಮಲಯಾಳಂನ ಗೀತು ಮೋಹನ್ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡದ ಕೆವಿಎನ್ ಸಂಸ್ಥೆ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದು, ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಡುಗಡೆ ಕಾಣುತ್ತಿದೆ.