KGF 2; ದೆಹಲಿ ಬಳಿಕ ಮುಂಬೈನಲ್ಲಿ ಯಶ್, ಸಂಜಯ್ ದತ್, ರವೀನಾ ಭರ್ಜರಿ ಪ್ರಚಾರ

Published : Apr 05, 2022, 06:55 PM IST

ಕೆಜಿಎಫ್-2 ತಂಡ ಈಗಾಗಲೇ ಪ್ಯಾನ್ ಇಂಡಿಯಾ ಪ್ರಚಾರ ಕಾರ್ಯ ಪ್ರಾರಂಭ ಮಾಡಿದೆ. ಬೆಂಗಳೂರಿನಲ್ಲಿ ಟ್ರೇಲರ್ ಲಾಂಚ್ ಮಾಡಿ ಉತ್ತರ ಭಾರತದ ಕಡೆ ಹೊರಟಿರುವ ಕೆಜಿಎಫ್-2 ತಂಡ ಸದ್ಯ ಮುಂಬೈನಲ್ಲಿ ಪ್ರಚಾರ ಮಾಡುತ್ತಿದೆ. ಮುಂಬೈನಲ್ಲಿ ಪ್ರಮೋಷನ್ ಮಾಡುತ್ತಿರುವ ಯಶ್, ರವೀನಾ, ಸಂಜಯ್ದತ್, ಶ್ರೀನಿಧಿ ಶೆಟ್ಟಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

PREV
17
KGF 2; ದೆಹಲಿ ಬಳಿಕ ಮುಂಬೈನಲ್ಲಿ ಯಶ್, ಸಂಜಯ್ ದತ್, ರವೀನಾ ಭರ್ಜರಿ ಪ್ರಚಾರ
KGF2

ಕೆಜಿಎಫ್-2 ತಂಡ ಈಗಾಗಲೇ ಪ್ಯಾನ್ ಇಂಡಿಯಾ ಪ್ರಚಾರ ಕಾರ್ಯ ಪ್ರಾರಂಭ ಮಾಡಿದೆ. ಬೆಂಗಳೂರಿನಲ್ಲಿ ಟ್ರೇಲರ್ ಲಾಂಚ್ ಮಾಡಿ ಉತ್ತರ ಭಾರತದ ಕಡೆ ಹೊರಟಿರುವ ಕೆಜಿಎಫ್-2 ತಂಡ ಭರ್ಜರಿ ಪ್ರಚಾರ ಮಾಡುತ್ತಿದೆ. ಮೊದಲು ದೇಹಲಿಯಲ್ಲಿ ಪ್ರಚಾರ ಮಾಡಿದ್ದ ಯಶ್ ಮತ್ತು ತಂಡದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

27
KGF2

ದೆಹಲಿ ಬಳಿಕ ಮುಂಬೈಗೆ ಲಗ್ಗೆ ಇಟ್ಟಿರುವ ಕೆಜಿಎಫ್-2 ತಂಡದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟಿ ರವೀನಾ ಟಂಡನ್, ನಟಿ ಶ್ರೀನಿಧಿ ಶೆಟ್ಟಿ, ಸಂಜಯ್ ದತ್ ಮತ್ತು ಯಶ್ ಫೋಟೋಗಳು ವೈರಲ್ ಆಗಿವೆ.

 

37
KGF2

ಮುಂಬೈ ನಗರದಲ್ಲಿ ಭರ್ಜರಿ ಪ್ರಚಾರ ಮಾಡುತ್ತಿರು ಸಿನಿಮಾತಂಡದ ಸ್ಟೈಲಿಶ್ ಲುಕ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಯಾವುದೇ ಬಾಲಿವುಡ್ ಸ್ಟಾರ್ ಗೂ ಕಮ್ಮಿ ಇಲ್ಲದ ಹಾಗೆ ಕಾಣಿಸುತ್ತಿದ್ದಾರೆ.

 

47
KGF2

ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿ ಟ್ರೈಲರ್ ರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ದೇಶಾದ್ಯಂತ ಪತ್ರಕರ್ತರಿಗೆ ಆಹ್ವಾನ ನೀಡಲಾಗಿತ್ತು. ಸ್ಟಾರ್ ನಟರ ಸಮ್ಮುದಲ್ಲಿ ಅದ್ಧೂರಿ ಬಿಡುಗಡೆ ಕಂಡಿತ್ತು.

 

57
KGF2

ಕೆಜಿಎಫ್ 2 ಸಿನಿಮಾದ ಅವಧಿ 2 ಗಂಟೆ 48 ನಿಮಿಷ. ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್‌ ಸಿಕ್ಕಿದ್ದು, 12 ವರ್ಷ ಕೆಳಗಿನ ಮಕ್ಕಳು ಮಾತ್ರ ಪೋಷಕರ ಜೊತೆಗೆ ಈ ಸಿನಿಮಾ ನೋಡಬಹುದಾಗಿದೆ. ಏ.14ರಂದು ಐದು ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದೆ.

 

67
KGF2

ಹೊಂಬಾಳೆ ಫಿಲ್ಮಂ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2 ಸಿನಿಮಾ ಏಪ್ರಿಲ್ 14ರಂದು ಅದ್ದೂರಿಯಾಗಿ ತೆರೆ ಕಾಣುತ್ತಿದೆ. ರಾಕಿಂಗ್ ಸ್ಟಾರ್‌ ಯಶ್ ರಾಕಿ ಭಾಯ್ ಆದ ಸಿನಿಮಾ ಇದು.

 

77
KGF2

ಯಶ್ ನಟನೆಯ ‘ಕೆಜಿಎಫ್ 2’ ಚಿತ್ರವನ್ನು ಏ. 8ರಿಂದ ಏ.13ರವರೆಗೆ ದೇಶಾದ್ಯಂತ ಆಯ್ದ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುತ್ತಿದೆ. ಚಿತ್ರವನ್ನು ವಿನಾಯಿತಿ ದರದಲ್ಲಿ ಈ ಪ್ರದರ್ಶನ ಮಾಡಲಾಗುವುದು ಎಂದು ಚಿತ್ರತಂಡ ಪ್ರಕಟಿಸಿದೆ.

 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories