ಯಡಿಯೂರಪ್ಪ ಕರೆ ಮಾಡಿ ಭರವಸೆ ನೀಡಿದ್ದೇ ತಡ ಅಖಾಡಕ್ಕಿಳಿದ ಸಿದ್ದರಾಮಯ್ಯ

First Published Apr 7, 2020, 9:33 PM IST

ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಡವರಿಗೆ ಉಚಿತವಾಗಿ ಆಹಾರ ವಿತರಿಸುವಂತೆ ಸಿದ್ದರಾಮಯ್ಯ ಪತ್ರ ತಲುಪುತ್ತಿದ್ದಂತೆಯೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೂರವಾಣಿ ಮೂಲಕ ಮಾತುಕತೆ ನಡೆಸಿ ಪರಿಶೀಲಿಸುವ ಭರವಸೆ ನೀಡಿದರು.ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಖಾಡಕ್ಕಿಳಿದು ರಿಯಾಲಿಟಿ ಚೆಕ್ ಮಾಡಿದರು. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರಿನ ವಿವಿಧ ಬಡಾವಣೆಯ ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
undefined
ಬೆಂಗಳೂರಿನ ವಸಂತನಗರ, ಹೆಬ್ಬಾಳ ಹಾಗೂ ಆರ್.ಟಿ. ನಗರ ಬಡಾವಣೆಯ ಇಂದಿರಾ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆದರು.
undefined
ಯಡಿಯೂರಪ್ಪ ಕರೆ ಮಾಡಿ ಭರವಸೆ ನೀಡಿದ್ದೇ ತಡ ಅಖಾಡಕ್ಕಿಳಿದ ಸಿದ್ದರಾಮಯ್ಯ
undefined
ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ನೀಡುತ್ತಿದ್ದ ಊಟ ಮತ್ತು ತಿಂಡಿಗೆ ಸರ್ಕಾರ ಇತ್ತೀಚೆಗೆ ದರ ನಿಗದಿ ಮಾಡಿದೆ. ಉಚಿತವಾಗಿ ನೀಡಿದರೆ ದುರುಪಯೋಗವಾಗುತ್ತದೆ ಎಂಬ ಕಾರಣಕ್ಕೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಸಂಬಂಧ ಸಿದ್ದರಾಮಯ್ಯ ಅವರು ಸರ್ಕಾರಕ್ಕೆ ಪತ್ರವನ್ನೂ ಬರೆದಿದ್ದರು. ಮುಖ್ಯಮಂತ್ರಿಯವರೂ ದೂರವಾಣಿ ಮೂಲಕ ಮಾತುಕತೆ ನಡೆಸಿ ಪರಿಶೀಲಿಸುವ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
undefined
ಕಾಂಗ್ರೆಸ್‌ನ ನೇತೃತ್ವದ ಸರ್ಕಾರದ ಅವಧಿಯಲ್ಲಿ 2017ರಲ್ಲಿ ತಾವೇ ಜಾರಿಗೆ ತಂದ ಮಹತ್ವಕಾಂಕ್ಷಿ ಇಂದಿರಾ ಕ್ಯಾಂಟೀನ್‌ಗಳಿಗೆ ಸಿದ್ದರಾಮಯ್ಯ ಭೇಟಿ ಮಾಡಿ ರಿಯಾಲಿಟಿ ಚೆಕ್ ಮಾಡಿರುವುದು ವಿಶೇಷ.
undefined
2017ರಲ್ಲಿ ಸಿದ್ದರಾಮಯ್ಯ ಅವರೇ ಇಂದಿರಾ ಕ್ಯಾಂಟೀನ್ ಜಾರಿಗೆ ತಂದಿದ್ದರು.
undefined
ಈ ಇಂದಿರಾ ಕ್ಯಾಟೀನ್ ರಾಜ್ಯಾದ್ಯಂತ ತಾಲೂಕುವಾರು ವಿಸ್ತಾರ ಮಾಡಲಾಗಿದ್ದು, 5 ರೂ.ಗೆ ತಿಂಡಿ ಹಾಗೂ 10 ರೂ.ಗೆ ಊಟ ನಿಗದಿ ಮಾಡಲಾಗಿದೆ
undefined
click me!