Ind vs NZ ಟಿ20 ಸರಣಿ ವೀಕ್ಷಿಸಲು ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ, ಆದರೆ ಷರತ್ತುಗಳು ಅನ್ವಯ..!.

First Published | Nov 13, 2021, 4:54 PM IST

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿ (ICC T20 World Cup) ಮುಕ್ತಾಯವಾಗುತ್ತಿದ್ದಂತೆಯೇ ಟೀಂ ಇಂಡಿಯಾ (Team India), ತವರಿನಲ್ಲಿ ನ್ಯೂಜಿಲೆಂಡ್ (New Zealand Cricket Team) ಎದುರು 3 ಪಂದ್ಯಗಳ ಟಿ20 ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಇದರ ಬೆನ್ನಲ್ಲೇ ಬಿಸಿಸಿಐ (BCCI) ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 100% ಪ್ರೇಕ್ಷಕರು ಮೈದಾನಕ್ಕಾಗಮಿಸಿ ಕ್ರಿಕೆಟ್ ವೀಕ್ಷಿಸಲು ಅವಕಾಶ ಒದಗಿಸಿದೆ. ಆದರೆ ಕೆಲವೊಂದು ಷರತ್ತುಗಳನ್ನು ವಿಧಿಸಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

100 Percent attendance approved at Sawai Mansingh Stadium for 1st India vs New Zealand T20I kvn

ನವೆಂಬರ್ 17ರಿಂದ ಆರಂಭಗೊಳ್ಳಲಿರುವ ಭಾರತ ಹಾಗೂ ನ್ಯೂಜಿಲೆಂಡ್‌ ನಡುವಿನ ಟಿ20 ಸರಣಿಗೆ ಆತಿಥ್ಯ ವಹಿಸಲಿರುವ ಕ್ರೀಡಾಂಗಣಗಳಿಗೆ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

100 Percent attendance approved at Sawai Mansingh Stadium for 1st India vs New Zealand T20I kvn

ಮೊದಲ ಪಂದ್ಯಕ್ಕೆ ಜೈಪುರ ಆತಿಥ್ಯ ನೀಡಲಿದ್ದು, ರಾಜಸ್ಥಾನ ಕ್ರಿಕೆಟ್‌ ಸಂಸ್ಥೆ ತನ್ನ ಕ್ರೀಡಾಂಗಣದ 25,000 ಆಸನಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ರಾಜಸ್ಥಾನ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೈಭವ್ ಗೆಹ್ಲೋಟ್ ತಿಳಿಸಿದ್ದಾರೆ.

Tap to resize

ಜೈಪುರದ ಸವಾಯ್‌ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ 8 ವರ್ಷಗಳ ಬಳಿಕ ಅಂತಾರಾಷ್ಟ್ರೀಯ ಪಂದ್ಯ ನಡೆಯಲಿದೆ. ಕೋವಿಡ್‌ನ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಪ್ರೇಕ್ಷಕರಿಗೆ ಮೈದಾನ ಪ್ರವೇಶಿಸಲು ಅನುವು ಮಾಡಿಕೊಡಲು ತಿಳಿಸಿದೆ.

ಪಂದ್ಯ ವೀಕ್ಷಿಸಲು ಬರುವ ಪ್ರೇಕ್ಷಕರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ ಸರಿಯಾದ ಸ್ಯಾನಿಟೈಸರ್ ವ್ಯವಸ್ಥೆ ಹಾಗೂ ಥರ್ಮಲ್‌ ಸ್ಕ್ಯಾನಿಂಗ್ ಮಾಡಲು ರಾಜ್ಯ ಸರ್ಕಾರ ರಾಜಸ್ಥಾನ ಕ್ರಿಕೆಟ್ ಸಂಸ್ಥೆಗೆ ತಿಳಿಸಿದೆ.

ಇನ್ನು ಸಂಪೂರ್ಣ ಎರಡು ಡೋಸ್ ಲಸಿಕೆ ಪಡೆದವರಿಗೆ ಮೈದಾನ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಇನ್ನು ಒಂದು ಡೋಸ್ ಲಸಿಕೆ ಪಡೆದವರು, ಪಂದ್ಯ ಆರಂಭಕ್ಕೆ 48 ಗಂಟೆಗಳ ಮುನ್ನ RT-PCR ಟೆಸ್ಟ್ ನಡೆಸಿ ವರದಿಯೊಂದಿಗೆ ಮೈದಾನಕ್ಕೆ ಬರುವಂತೆ ಸೂಚಿಸಲಾಗಿದೆ

ಕೋವಿಡ್‌ ಬಳಿಕ ಭಾರತದಲ್ಲಿ ಈ ವರೆಗೂ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ಸಿಕ್ಕಿಲ್ಲ. ಭಾರತ-ಇಂಗ್ಲೆಂಡ್‌ ನಡುವಿನ ಟೆಸ್ಟ್‌ಗೆ ಶೇ.50ರಷ್ಟು ಪ್ರೇಕ್ಷಕರನ್ನು ಬಿಡಲಾಗಿತ್ತು. ಬಳಿಕ ಕೋವಿಡ್‌ ಪ್ರಕರಣಗಳು ಹೆಚ್ಚಾದ ಕಾರಣ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲಾಗಿತ್ತು.

ರಾಜಸ್ಥಾನದಲ್ಲಿ ನಡೆಯಲಿರುವ ಮೊದಲ ಟಿ20 ಬಳಿಕ ನವೆಂಬರ್ 19ಕ್ಕೆ ರಾಂಚಿಯಲ್ಲಿ 2ನೇ ಟಿ20 ನಡೆಯಲಿದ್ದು, ಇನ್ನು ನವೆಂಬರ್ 21ಕ್ಕೆ ಕೋಲ್ಕತದಲ್ಲಿ 3ನೇ ಪಂದ್ಯ ನಡೆಯಲಿದೆ. ಇದಾದ ಬಳಿಕ ಉಭಯ ತಂಡಗಳ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

ರಾಹುಲ್‌ ದ್ರಾವಿಡ್‌ ಮಾರ್ಗದರ್ಶನದಲ್ಲಿ, ರೋಹಿತ್ ಶರ್ಮಾ ನಾಯಕತ್ವದಲ್ಲಿ ಬಲಿಷ್ಠ ನ್ಯೂಜಿಲೆಂಡ್ ಎದುರು ಟೀಂ ಇಂಡಿಯಾ ಯಾವ ರೀತಿಯ ಪ್ರದರ್ಶನ ತೋರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Latest Videos

click me!