147 ವರ್ಷಗಳಲ್ಲೇ ಮೊದಲು: ವಿಶ್ವದಾಖಲೆಯ ಹೊಸ್ತಿಲಲ್ಲಿ ಜೇಮ್ಸ್ ಆಂಡರ್‌ಸನ್

First Published Mar 2, 2024, 4:32 PM IST

ಧರ್ಮಶಾಲಾ: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಈ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಅನುಭವಿ ವೇಗಿ ಜೇಮ್ಸ್ ಆಂಡರ್‌ಸನ್ ಅಪರೂಪದ ವಿಶ್ವದಾಖಲೆ ಬರೆಯಲು ಸಜ್ಜಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ ಪಂದ್ಯವು ಮಾರ್ಚ್ 07ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಅನುಭವಿ ವೇಗಿ ಹೊಸ ಮೈಲಿಗಲ್ಲು ನೆಡಲು ಸಜ್ಜಾಗಿದ್ದಾರೆ.

5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್ ತಂಡವು ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಚಕ ಜಯ ಸಾಧಿಸಿತ್ತು. ಆದರೆ ಆ ಬಳಿಕ ಆ ಲಯ ಮುಂದುವರೆಸಿಕೊಂಡು ಹೋಗಲು ಸಾಧ್ಯವಾಗಿರಲಿಲ್ಲ.

ಮೊದಲ ಸೋಲಿನಿಂದ ಎಚ್ಚೆತ್ತುಕೊಂಡ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಆ ಬಳಿಕ ಸತತ 3 ಪಂದ್ಯಗಳನ್ನು ಜಯಿಸುವ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ 3-1 ಅಣತರದಲ್ಲಿ ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಇದೀಗ ಇಂಗ್ಲೆಂಡ್ ಅನುಭವಿ ವೇಗಿ ಜೇಮ್ಸ್‌ ಆಂಡರ್‌ಸನ್ ಇದೀಗ 700 ವಿಕೆಟ್ ಕಬಳಿಸಲು ಇನ್ನು ಕೇವಲ 2  ವಿಕೆಟ್ ಅವಶ್ಯಕತೆಯಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಟೆಸ್ಟ್‌ನಲ್ಲಿ ಆಂಡರ್‌ಸನ್ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಧರ್ಮಶಾಲಾ ಟೆಸ್ಟ್‌ನಲ್ಲಿ ಇನ್ನೆರಡು ವಿಕೆಟ್ ಕಬಳಿಸಿದರೆ ಟೆಸ್ಟ್ ಕ್ರಿಕೆಟ್‌ನಲ್ಲಿ 700 ವಿಕೆಟ್ ಕಬಳಿಸಿದ ಜಗತ್ತಿನ ಮೊದಲ ವೇಗದ ಬೌಲರ್ ಹಾಗೂ ಒಟ್ಟಾರೆ ಮೂರನೇ ಬೌಲರ್ ಎನ್ನುವ ವಿಶ್ವದಾಖಲೆ ನಿರ್ಮಿಸಲಿದ್ದಾರೆ.

ಇಲ್ಲಿಯವರೆ 41 ವರ್ಷದ ಆಂಡರ್‌ಸನ್ 186 ಟೆಸ್ಟ್‌ ಪಂದ್ಯಗಳನ್ನಾಡಿ 698 ವಿಕೆಟ್ ಕಬಳಿಸಿದ್ದಾರೆ. ಬಲಗೈ ವೇಗಿ ಆಂಡರ್‌ಸನ್ 2003ರಲ್ಲಿ ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.

Shane Warne Ball of the Centuary

Shane Warne Ball of the Centuary

ಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರುಳೀಧರನ್, ಟೆಸ್ಟ್‌ ಕ್ರಿಕೆಟ್ ಇತಿಹಾಸದಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಎನ್ನುವ ವಿಶ್ವದಾಖಲೆ ಹೊಂದಿದ್ದಾರೆ. ಮುರುಳೀಧರನ್ ಟೆಸ್ಟ್‌ ಕ್ರಿಕೆಟ್‌ನಲ್ಲಿ 800 ವಿಕೆಟ್ ಕಬಳಿಸಿದ ಮೊದಲ ಹಾಗೂ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ.
 

click me!