2027ರ ಏಕದಿನ ವಿಶ್ವಕಪ್ ಬಗ್ಗೆ ಉಲ್ಟಾ ಹೊಡೆದ ರೋಹಿತ್ ಶರ್ಮಾ..! ಕೊನೆಯ ಕ್ಷಣದಲ್ಲಿ ಹೀಗ್ಯಾಕೆ ಅಂದ್ರು ಹಿಟ್‌ಮ್ಯಾನ್?

Published : Sep 11, 2026, 11:01 AM IST

ಬೆಂಗಳೂರು: 2027ರ ಐಸಿಸಿ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ರೋಹಿತ್ ಶರ್ಮಾ, ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ಎದುರಿನ ಕೊನೆಯ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ್ದರು. ಆದರೆ ಇದೀಗ ಹಿಟ್‌ಮ್ಯಾನ್ ಅಚ್ಚರಿಯ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.

PREV
16
2027ರ ಏಕದಿನ ವಿಶ್ವಕಪ್ ಆಡಲು ಕನಸು ಕಾಣುತ್ತಿರುವ ರೋಹಿತ್

ಕೆಲ ತಿಂಗಳ ಹಿಂದೆ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯೇ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಸರಣಿಯಾಗಲಿದೆ ಎನ್ನುವ ಚರ್ಚೆ ಜೋರಾಗಿತ್ತು. ಅದಕ್ಕೆ ತಕ್ಕಂತೆ ರೋಹಿತ್ ಶರ್ಮಾ ಕೂಡಾ ಮೊದಲೆರಡು ಪಂದ್ಯಗಳಲ್ಲಿ ಅಲ್ಪ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿ ವೈಫಲ್ಯ ಅನುಭವಿಸಿದ್ದರು.

26
ಶತಕ ಸಿಡಿಸಿ ಟೀಕಾಕಾರರ ಬಾಯಿ ಮುಚ್ಚಿಸಿದ ರೋಹಿತ್ ಶರ್ಮಾ

ಹೀಗಾಗಿ ಲಾರ್ಡ್ಸ್‌ನಲ್ಲಿ ನಿಗದಿಯಾಗಿದ್ದ ಮೂರನೇ ಹಾಗೂ ನಿರ್ಣಾಯಕ ಪಂದ್ಯವು ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಪಾಲಿಗೆ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗುವ ಸಾಧ್ಯತೆಯಿದೆ ಎನ್ನುವ ಚರ್ಚೆಗಳ ನಡುವೆ ಹಿಟ್‌ಮ್ಯಾನ್ ಆಕರ್ಷಕ ಶತಕ ಸಿಡಿಸುವ ಮೂಲಕ ಎಲ್ಲಾ ಟೀಕಾಕಾರರ ಬಾಯಿ ಮುಚ್ಚಿಸಿದ್ದರು. ಈ ಮೂಲಕ ತಾನು 2027ರ ಏಕದಿನ ವಿಶ್ವಕಪ್ ಆಡಲು ಫಿಟ್ ಇದ್ದೇನೆ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದ್ದರು.

36
2027ರ ಏಕದಿನ ವಿಶ್ವಕಪ್‌ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ

ಇದೀಗ 2027ರ ಏಕದಿನ ವಿಶ್ವಕಪ್‌ನಲ್ಲಿ ಆಡುವ ಬಗ್ಗೆ ಭಾರತದ ಮಾಜಿ ನಾಯಕ ರೋಹಿತ್‌ ಶರ್ಮಾ ಕೊನೆಗೂ ಮೌನ ಮುರಿದಿದ್ದು, ಅದಕ್ಕಿನ್ನೂ ಸಮಯವಿದೆ, ನೋಡೋಣ ಎಂದು ಉಲ್ಟಾ ಹೊಡೆದಿದ್ದಾರೆ. ನಗರದಲ್ಲಿ ಖಾಸಗಿ ಸಮಾರಂಭವೊಂದರಲ್ಲಿ ಪಾಲ್ಗೊಂಡ ರೋಹಿತ್‌ಗೆ ಪತ್ರಕರ್ತರಿಂದ 2027ರ ವಿಶ್ವಕಪ್‌ ಬಗ್ಗೆ ಪ್ರಶ್ನೆ ಎದುರಾಯಿತು.

46
2027ರ ಏಕದಿನ ವಿಶ್ವಕಪ್‌ಗೆ ಇನ್ನೂ ಸಮಯವಿದೆ ಎಂದ ಹಿಟ್‌ಮ್ಯಾನ್

ಅದಕ್ಕೆ ಉತ್ತರಿಸಿದ ರೋಹಿತ್‌, ‘2027ರ ಅಕ್ಟೋಬರ್‌ಗೆ ಇನ್ನೂ ಸಮಯವಿದೆ. ಅದರ ಬಗ್ಗೆ ಆಗಲೇ ನೋಡೋಣ’ ಎಂದಿದ್ದಾರೆ. ಇನ್ನು, 2024ರ ವಿಶ್ವಕಪ್‌ ಗೆಲುವಿನ ಬಳಿಕ ಮುಂಬೈನಲ್ಲಿ ನಡೆದ ತೆರೆದ ಬಸ್‌ನ ವಿಜಯಯಾತ್ರೆ ರೀತಿ 2027ರ ವಿಶ್ವಕಪ್‌ ಗೆದ್ದ ಬಳಿಕವೂ ಪರೇಡ್‌ ನಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರೋಹಿತ್‌, ‘ಬಸ್ ಪರೇಡ್‌ ಈಗ ಸಾಧ್ಯವಿದೆ ಎಂದು ನನಗೆ ಅನಿಸುವುದಿಲ್ಲ’ ಎಂದಿದ್ದಾರೆ.

56
ಏಕದಿನ ವಿಶ್ವಕಪ್ ಗೆಲ್ಲದ ರೋಹಿತ್ ಶರ್ಮಾ

ರೋಹಿತ್ ಶರ್ಮಾ ಒಮ್ಮೆ ಆಟಗಾರನಾಗಿ ಹಾಗೂ ಒಮ್ಮೆ ನಾಯಕನಾಗಿ ಒಟ್ಟು ಎರಡು ಟಿ20 ವಿಶ್ವಕಪ್ ಜಯಿಸಿದ್ದಾರೆ. ಅದೇ ರೀತಿ ಒಮ್ಮೆ ಆಟಗಾರನಾಗಿ ಹಾಗೂ ಒಮ್ಮೆ ನಾಯಕನಾಗಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಜಯಿಸಿದ್ದಾರೆ. ಆಟಗಾರನಾಗಿ ಒಮ್ಮೆಯೂ ಏಕದಿನ ವಿಶ್ವಕಪ್ ಗೆಲ್ಲಲು ರೋಹಿತ್ ಶರ್ಮಾಗೆ ಸಾಧ್ಯವಾಗಿಲ್ಲ. ಅದೊಂದು ಕೊರಗು ಈಗಲೂ ರೋಹಿತ್‌ಗೆ ಇದೆ.

66
ಅಭಿಮಾನಿಗಳನ್ನು ಗೊಂದಲಕ್ಕೆ ದೂಡಿದ ರೋಹಿತ್ ಶರ್ಮಾ ಮಾತು

2011ರಲ್ಲಿ ಭಾರತ ತಂಡವು ಏಕದಿನ ವಿಶ್ವಕಪ್ ಗೆದ್ದಾಗ ರೋಹಿತ್ ಶರ್ಮಾಗೆ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಇದಾದ ಬಳಿಕ 2015 ಹಾಗೂ 2019 ಏಕದಿನ ವಿಶ್ವಕಪ್‌ನಲ್ಲಿ ಭಾರತ ಸೆಮೀಸ್‌ನಲ್ಲೇ ಮುಗ್ಗರಿಸಿತ್ತು. ಇನ್ನು 2023ರ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡ ಅಜೇಯವಾಗಿ ಫೈನಲ್ ಪ್ರವೇಶಿಸಿತ್ತಾದರೂ, ಪ್ರಶಸ್ತಿ ಸುತ್ತಿನಲ್ಲಿ ಆಸ್ಟ್ರೇಲಿಯಾಗೆ ಶರಣಾಗಿತ್ತು. ಇದೀಗ ರೋಹಿತ್ ಶರ್ಮಾ ಅವರ ಈ ಹೇಳಿಕೆ ಅಭಿಮಾನಿಗಳನ್ನು ಗೊಂದಲಕ್ಕೆ ಸಿಲುಕಿಸಿರುವುದಂತೂ ಸುಳ್ಳಲ್ಲ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories