ಬಾಂಗ್ಲಾದೇಶ ಎದುರು ಸಿಕ್ಸರ್ ಸುರಿಮಳೆ ಸುರಿಸಿ ಅಪರೂಪದ ದಾಖಲೆ ಬರೆದ ರೋಹಿತ್ ಶರ್ಮಾ..!

First Published Dec 8, 2022, 1:25 PM IST

ಢಾಕಾ(ಡಿ.08): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೆಚ್ಚೆದೆಯ ಬ್ಯಾಟಿಂಗ್ ಹೊರತಾಗಿಯೂ 5 ರನ್‌ಗಳ ರೋಚಕ ಸೋಲು ಅನುಭವಿಸಿದೆ. ಆದರೆ ಇದೇ ಪಂದ್ಯದಲ್ಲಿ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ  ಅಪರೂಪದ ದಾಖಲೆ ಬರೆದಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 500+ ಸಿಕ್ಸರ್ ಸಿಡಿಸಿದ ಭಾರತದ ಮೊದಲ ಹಾಗೂ ಒಟ್ಟಾರೆ ಎರಡನೇ ಬ್ಯಾಟರ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಟಾಪ್ 5 ಬ್ಯಾಟರ್‌ಗಳ ಕಂಪ್ಲೀಟ್ ಡೀಟೈಲ್ಸ್‌ ಇಲ್ಲಿದೆ ನೋಡಿ
 

1. ಕ್ರಿಸ್ ಗೇಲ್: 553 ಸಿಕ್ಸರ್

'ಯೂನಿವರ್ಸಲ್‌ ಬಾಸ್' ಖ್ಯಾತಿಯ ಕ್ರಿಸ್ ಗೇಲ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 483 ಪಂದ್ಯಗಳನ್ನಾಡಿ 553 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

2. ರೋಹಿತ್ ಶರ್ಮಾ: 502 ಸಿಕ್ಸರ್

'ಹಿಟ್‌ ಮ್ಯಾನ್' ಖ್ಯಾತಿಯ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, 428 ಪಂದ್ಯಗಳನ್ನಾಡಿ 502 ಸಿಕ್ಸರ್‌ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ಎರಡನೇ ಬ್ಯಾಟರ್ ಎನ್ನುವ ಕೀರ್ತಿಗೆ ರೋಹಿತ್ ಪಾತ್ರರಾಗಿದ್ದಾರೆ.
 

3. ಶಾಹಿದ್ ಅಫ್ರಿದಿ:  

ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ, 524 ಪಂದ್ಯಗಳನ್ನಾಡಿ 476 ಸಿಕ್ಸರ್‌ ಸಿಡಿಸುವ ಮೂಲಕ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
 

4.ಬ್ರೆಂಡನ್ ಮೆಕ್ಕಲಂ: 398 ಸಿಕ್ಸರ್

ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಬ್ರೆಂಡನ್ ಮೆಕ್ಕಲಂ 432 ಪಂದ್ಯಗಳನ್ನಾಡಿ 398 ಸಿಕ್ಸರ್ ಸಿಡಿಸುವ ಮೂಲಕ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

5. ಮಾರ್ಟಿನ್ ಗಪ್ಟಿಲ್‌: 383 ಸಿಕ್ಸರ್

ನ್ಯೂಜಿಲೆಂಡ್ ಅನುಭವಿ ಆರಂಭಿಕ ಬ್ಯಾಟರ್ ಮಾರ್ಟಿನ್ ಗಪ್ಟಿಲ್‌ 367 ಪಂದ್ಯಗಳನ್ನಾಡಿ 383 ಸಿಕ್ಸರ್ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.
 

click me!