ಲಂಡನ್: ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಚೊಚ್ಚಲ ಆವೃತ್ತಿಯ 'ದಿ ಹಂಡ್ರೆಡ್' ಕ್ರಿಕೆಟ್ ಟೂರ್ನಿಯು ಜುಲೈ 21ರಿಂದ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಭಾರತದ ಐವರು ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಪಾಲ್ಗೊಳ್ಳಲಿದ್ದಾರೆ.
'ದಿ ಹಂಡ್ರೆಡ್' ಟೂರ್ನಿಯಲ್ಲಿ 8 ಪುರುಷ ಹಾಗೂ 8 ಮಹಿಳಾ ತಂಡಗಳು ಚೊಚ್ಚಲ ಆವೃತ್ತಿಯಲ್ಲಿ ಪ್ರಶಸ್ತಿಗಾಗಿ ಕಾದಾಡಲಿವೆ. ಭಾರತ ಮಹಿಳಾ ತಂಡದ ಯಾವೆಲ್ಲಾ ಆಟಗಾರ್ತಿಯರು ಯಾವ ತಂಡವನ್ನು ಪ್ರತಿನಿಧಿಸಲಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.