IPL 2025: RCB ಪರ ಪ್ಲೇಯರ್ ಆಫ್ ದಿ ಮ್ಯಾಚ್ ಗೆದ್ದ 9 ಕ್ರಿಕೆಟಿಗರಿವರು!

Published : Jun 05, 2025, 01:09 PM IST

ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಗೆಲುವಿನ ಹಿಂದೆ ಸಂಘಟಿತ ಪ್ರದರ್ಶನವಿದ್ದು, 9 ಆಟಗಾರರು ಪಂದ್ಯ ಶ್ರೇಷ್ಠ ಪ್ರಶಸ್ತಿ ಜಯಿಸಿರುವುದು ವಿಶೇಷ.

PREV
19

1. ಕೃನಾಲ್ ಪಾಂಡ್ಯ:

ಡೆಲ್ಲಿ ಕ್ಯಾಪಿಟಲ್ಸ್‌, ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ಎದುರು ಆರ್‌ಸಿಬಿ ಆಲ್ರೌಂಡರ್ ಕೃನಾಲ್ ಪಾಂಡ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಮುಡಿಗೇರಿಸಿಕೊಂಡರು.

29

2. ರಜತ್ ಪಾಟೀದಾರ್:

ಆರ್‌ಸಿಬಿ ನಾಯಕ ರಜತ್ ಪಾಟೀದಾರ್, ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಎದುರು ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು.

39

3. ಫಿಲ್ ಸಾಲ್ಟ್:

ರಾಜಸ್ಥಾನ ರಾಯಲ್ಸ್ ಎದುರು ಫಿಲ್ ಸಾಲ್ಟ್ 33 ಎಸೆತಗಳಲ್ಲಿ 65 ರನ್ ಸಿಡಿಸಿ ತಂಡವನ್ನು ಗೆಲ್ಲಿಸಿದ್ದರು. ಹೀಗಾಗಿ ಸಾಲ್ಟ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು

49

4. ಟಿಮ್ ಡೇವಿಡ್:

ಮಳೆ ಅಡಚಣೆಯಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ಎದುರು ಪಂಜಾಬ್ ಗೆದ್ದಿತ್ತು. ಹೀಗಿದ್ದೂ ಕೇವಲ 26 ಎಸೆತಗಳಲ್ಲಿ 50 ರನ್ ಚಚ್ಚಿದ ಟಿಮ್ ಡೇವಿಡ್ ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸಿದ್ರು.

59

5. ವಿರಾಟ್ ಕೊಹ್ಲಿ: ಪಂಜಾಬ್ ಕಿಂಗ್ಸ್

ಮುಲ್ಲಾನಪುರದಲ್ಲಿ ಪಂಜಾಬ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 73 ರನ್ ಸಿಡಿಸಿ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿದ್ದರು. ಜತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದರು.

69

6. ಜೋಶ್ ಹೇಜಲ್‌ವುಡ್: ರಾಜಸ್ಥಾನ ರಾಯಲ್ಸ್

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಜೋಶ್ ಹೇಜಲ್‌ವುಡ್ 33 ರನ್ ನೀಡಿ 4 ವಿಕೆಟ್ ಕಬಳಿಸುವ ಮೂಲಕ ಬೆಂಗಳೂರು ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.

79

7. ರೊಮ್ಯಾರಿಯೋ ಶಫರ್ಡ್‌: ಚೆನ್ನೈ ಸೂಪರ್ ಕಿಂಗ್ಸ್‌

ಚೆನ್ನೈ ಸೂಪರ್ ಕಿಂಗ್ಸ್ ಎದುರು ಶೆಫರ್ಡ್‌ ಕೇವಲ 14 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 53 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹಾಗಯೇ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು.

89

8. ಜಿತೇಶ್ ಶರ್ಮಾ: ಲಖನೌ ಸೂಪರ್ ಜೈಂಟ್ಸ್

ಲಖನೌ ಸೂಪರ್ ಜೈಂಟ್ಸ್ ಎದುರು ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಕೇವಲ 33 ಎಸೆತಗಳಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ ಅಜೇಯ 85 ರನ್ ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ತನ್ನದಾಗಿಸಿಕೊಂಡರು.

99

9. ಸುಯಾಶ್ ಶರ್ಮಾ: ಪಂಜಾಬ್ ಕಿಂಗ್ಸ್

ಆರ್‌ಸಿಬಿ ಸ್ಟಾರ್ ಸ್ಪಿನ್ನರ್ ಸುಯಾಶ್ ಶರ್ಮಾ ಕ್ವಾಲಿಫೈಯರ್ 1 ಪಂದ್ಯದಲ್ಲಿ 17 ರನ್ ನೀಡಿ 3 ವಿಕೆಟ್ ಕಬಳಿಸುವ ಮೂಲಕ ತಂಡ ಫೈನಲ್‌ಗೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು

Read more Photos on
click me!

Recommended Stories