IPL ಇತಿಹಾಸದಲ್ಲಿ ಅತಿಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸಿದ ಟಾಪ್ 6 ಕ್ರಿಕೆಟಿಗರಿವರು..!

First Published Mar 7, 2023, 5:49 PM IST

ಬೆಂಗಳೂರು(ಮಾ.07): ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 31ರಿಂದ ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಗೆ ಚಾಲನೆ ಸಿಗಲಿದೆ. ಈ ಸಂದರ್ಭದಲ್ಲಿ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಅತಿಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸಿದ ಟಾಪ್ 6 ಆಟಗಾರರ ಕಂಪ್ಲೀಟ್ ಮಾಹಿತಿಯನ್ನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ ನೋಡಿ.
 

1. ಎಬಿ ಡಿ ವಿಲಿಯರ್ಸ್‌:

ಒಂದು ದಶಕಗಳ ಕಾಲ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಭಾಗವಾಗಿದ್ದ ಎಬಿ ಡಿವಿಲಿಯರ್ಸ್‌ ಒಟ್ಟು 25 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸುವ ಮೂಲಕ, ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

2. ಕ್ರಿಸ್ ಗೇಲ್‌:

ಯೂನಿವರ್ಸೆಲ್ ಬಾಸ್‌ ಖ್ಯಾತಿಯ ಆರ್‌ಸಿಬಿ ಮಾಜಿ ಕ್ರಿಕೆಟಿಗ ಕ್ರಿಸ್‌ ಗೇಲ್ ಒಟ್ಟು 22 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆರ್‌ಸಿಬಿ ಪರ ಗೇಲ್‌ ಹಲವು ಬಾರಿ ಮ್ಯಾನ್ ಆಫ್‌ ದಿ ಮ್ಯಾಚ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
 

3. ರೋಹಿತ್ ಶರ್ಮಾ:

ಮುಂಬೈ ಇಂಡಿಯನ್ಸ್‌ ತಂಡದ ಅತ್ಯಂತ ಯಶಸ್ವಿ ನಾಯಕನೆಂದೇ ಗುರುತಿಸಿಕೊಂಡಿರುವ ರೋಹಿತ್ ಶರ್ಮಾ, ಒಟ್ಟು 18 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಸದ್ಯ ಹಾಲಿ ಐಪಿಎಲ್‌ ಆಟಗಾರರಲ್ಲಿ ರೋಹಿತ್ ಅಗ್ರಸ್ಥಾನದಲ್ಲಿದ್ದು, ಈ ಬಾರಿ ಗೇಲ್-ಎಬಿಡಿ ದಾಖಲೆ ಮುರಿಯುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
 

4. ಡೇವಿಡ್‌ ವಾರ್ನರ್‌

ಆಸ್ಟ್ರೇಲಿಯಾದ ಸ್ಪೋಟಕ ಆರಂಭಿಕ ಬ್ಯಾಟರ್ ಡೇವಿಡ್‌ ವಾರ್ನರ್‌ ಕೂಡಾ 18 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸಲಿರುವ ವಾರ್ನರ್‌ ಕೂಡಾ ಗರಿಷ್ಠ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
 

5. ಮಹೇಂದ್ರ ಸಿಂಗ್ ಧೋನಿ:

ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಒಟ್ಟು 17 ಬಾರಿ ಐಪಿಎಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸುವ ಮೂಲಕ ಗರಿಷ್ಠ ಮ್ಯಾನ್ ಆಫ್‌ ದಿ ಮ್ಯಾಚ್ ಪಡೆದ ಆಟಗಾರರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಧೋನಿ ಪಾಲಿಗೆ 16ನೇ ಐಪಿಎಲ್ ಟೂರ್ನಿಯು ಬಹುತೇಕ ಕೊನೆಯ ಟೂರ್ನಿಯಾಗುವ ಸಾಧ್ಯತೆಯಿದೆ.
 

6. ಶೇನ್ ವಾಟ್ಸನ್‌:

ಆಸ್ಟ್ರೇಲಿಯಾದ ದಿಗ್ಗಜ ಆಲ್ರೌಂಡರ್ ಶೇನ್‌ ವಾಟ್ಸನ್‌, ಐಪಿಎಲ್‌ನಲ್ಲಿ 16 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಜಯಿಸುವ ಮೂಲಕ, ಗರಿಷ್ಠ ಮ್ಯಾನ್ ಆಫ್ ಮ್ಯಾಚ್ ಪಡೆದ ಆಟಗಾರರ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ವಾಟ್ಸನ್‌, ರಾಜಸ್ಥಾನ ರಾಯಲ್ಸ್‌, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಪ್ರತಿನಿಧಿಸಿದ್ದರು.
 

click me!