ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಶುಭಾರಂಭ ಮಾಡಿದೆ. ಇನ್ನು ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ದಿಗ್ಗಜರನ್ನು ಹಿಂದಿಕ್ಕಿ ಹೊಸ ದಾಖಲೆ ಬರೆದಿದ್ದಾರೆ.
ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಇದೀಗ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿಕಡಿಮೆ ಎಸೆತಗಳನ್ನು ಎದುರಿಸಿ 5000 ರನ್ ಪೂರೈಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ.
26
1. ಅಭಿಷೇಕ್ ಶರ್ಮಾ
ಭಾರತದ ಸ್ಪೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಕೇವಲ 2898 ಎಸೆತಗಳನ್ನು ಎದುರಿಸುವ ಮೂಲಕ ಅತಿವೇಗವಾಗಿ 5000 ಟಿ20 ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ.
36
2. ಆಂಡ್ರೆ ರಸೆಲ್:
ವೆಸ್ಟ್ ಇಂಡೀಸ್ ದೈತ್ಯ ಪ್ರತಿಭೆ ಹಾಗೂ ಸ್ಪೋಟಕ ಬ್ಯಾಟರ್ ಆಂಡ್ರೆ ರಸೆಲ್ 2942 ಎಸೆತಗಳನ್ನು ಎದುರಿಸಿ 5000 ರನ್ ಬಾರಿಸಿದ್ದು, ಇದೀಗ ಎರಡನೇ ಸ್ಥಾನಕ್ಕೆ ಜಾರಿದ್ದಾರೆ.
ಆಸ್ಟ್ರೇಲಿಯಾದ ಬಿಗ್ ಹಿಟ್ಟರ್ ಹಾಗೂ ಆರ್‌ಸಿಬಿಯ ಮ್ಯಾಚ್ ಫಿನಿಶರ್ ಆಗಿ ಗುರುತಿಸಿಕೊಂಡಿರುವ ಟಿಮ್ ಡೇವಿಡ್ 3127 ಎಸೆತಗಳನ್ನು ಎದುರಿಸಿ ಐದು ಸಾವಿರ ರನ್ ಬಾರಿಸಿದ್ದಾರೆ. ಈ ಮೂಲಕ ಟಿಮ್ ಡೇವಿಡ್ ಮೂರನೇ ಸ್ಥಾನದಲ್ಲಿದ್ದಾರೆ.
56
4. ವಿಲ್ ಜ್ಯಾಕ್ಸ್:
ಇಂಗ್ಲೆಂಡ್ ಹಾಗೂ ಮುಂಬೈ ಇಂಡಿಯನ್ಸ್ ಸ್ಪೋಟಕ ಬ್ಯಾಟರ್ ಆಗಿರುವ ವಿಲ್ ಜ್ಯಾಕ್ಸ್ 3196 ಎಸೆತಗಳನ್ನು ಎದುರಿಸಿ ಐದು ಸಾವಿರ ರನ್ ಪೂರೈಸುವ ಮೂಲಕ ನಾಲ್ಕನೇ ಸ್ಥಾನದಲ್ಲಿದ್ದಾರೆ.
66
5. ಗ್ಲೆನ್ ಮ್ಯಾಕ್ಸ್‌ವೆಲ್:
ಆಸ್ಟ್ರೇಲಿಯಾದ ಟಿ20 ಸ್ಪೆಷಲಿಸ್ಟ್ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ 3239 ಎಸೆತಗಳಲ್ಲಿ ಐದು ಸಾವಿರ ರನ್ ಪೂರೈಸುವ ಮೂಲಕ, ಅತಿವೇಗವಾಗಿ ಟಿ20 ಕ್ರಿಕೆಟ್‌ನಲ್ಲಿ ಐದು ಸಾವಿರ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.